Site icon Vistara News

Weather Report : 21 ಜಿಲ್ಲೆಗಳಲ್ಲಿ ಮಾತ್ರವೇ ಮಳೆ; ಬೆಂಗಳೂರಲ್ಲಿ ಹೇಗಿರಲಿದೆ?

Friends huddled together wrapped in cozy blankets sharing heartfelt conversations on a starry night

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ತೀವ್ರವಾಗಿ ತಗ್ಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಮಾನ್ಯ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿಯಲ್ಲಿ (Weather Report) ಹೇಳಿದೆ.

ದಕ್ಷಿಣ ಒಳನಾಡು (South Inland) ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Penalty to Post Master : ಅಂಚೆ ವಿಳಂಬದಿಂದ ಕೈತಪ್ಪಿದ ಮ್ಯಾನೇಜರ್‌ ಹುದ್ದೆ; ಪೋಸ್ಟ್‌ ಮಾಸ್ಟರ್‌ಗೆ 3.10 ಲಕ್ಷ ರೂ. ದಂಡ

ಉತ್ತರ ಒಳನಾಡು (North Inland) ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಈ ಪ್ರದೇಶದ ಉಳಿದ ಭಾಗಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಗಳಾದ (Malnad Districts) ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ, ಕರಾವಳಿ ಜಿಲ್ಲೆಗಳಾದ (coastal regions Rainfall) ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka live news: ಭ್ರಷ್ಟರಿಗೆ ಮುಂಜಾನೆ ಲೋಕಾಯುಕ್ತ ಶಾಕ್‌; ರಾಜ್ಯದ ಇಂದಿನ ಪ್ರಮುಖ ಸುದ್ದಿಗಳು

ಬೆಂಗಳೂರಲ್ಲಿಯೂ ಸಾಧಾರಣ ಮಳೆ

ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಲವೇ ಹೊತ್ತು ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದರೆ, ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೆಚ್ಚಿನ ಸಮಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

Exit mobile version