Site icon Vistara News

Weather Report : ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌; ಬೆಂಗಳೂರಿನಲ್ಲಿ ಹೇಗಿರಲಿದೆ ಮಳೆ ಅಬ್ಬರ

rain image

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮುಂಗಾರು (Southwest monsoon) ಸಕ್ರಿಯಗೊಂಡಿದ್ದು, ವಾರಂತ್ಯದಲ್ಲಿ ಗುಡುಗು ಸಹಿತ ಭಾರಿ (Heavy rain alert) ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Weather report) ಸಾಧ್ಯತೆ ಇದ್ದರೆ, ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗವಾದ ದಾವಣಗೆರೆಯಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿಯಲ್ಲಿ ಗುಡುಗು, ಮಿಂಚು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಧಾರವಾಡ ಮತ್ತು ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ತುಂತುರ ಮಳೆಯಾಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ 27 ಮತ್ತು ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಜು.8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಳನಾಡಿನಲ್ಲಿ ಬಿರುಗಾಳಿ ವೇಗವು ಗಂಟೆಗೆ 40-55 ಕಿ.ಮೀ ಇರುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Rain News : ಮಳೆ ಅನಾಹುತಕ್ಕೆ ಹಾಸನದಲ್ಲಿ ಮಹಿಳೆ ಬಲಿ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಗದಗ: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 24 ಡಿ.ಸೆ
ಮಂಗಳೂರು: 28 ಡಿ.ಸೆ – 25 ಡಿ.ಸೆ
ಹೊನ್ನಾವರ: 29 ಡಿ.ಸೆ- 23 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version