Site icon Vistara News

Weather Report : ನಾಳೆ ಹಲವೆಡೆ ತುಂತುರು ಮಳೆ

Rain drops

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್‌ 31ರಂದು ಮಳೆಯಾಗುವ (Weather report) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Rain news) ನೀಡಿದೆ. ರಾಜ್ಯಾದ್ಯಂತ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದು ಕೆಲವು ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಮಳೆ ಮುನ್ಸೂಚನೆ ಇದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಜಿಟಿ ಜಿಟಿ ಮಳೆಯಾಗಬಹುದು. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು, ವಿಜಯಪುರದಲ್ಲಿ ಅಲ್ಲಲ್ಲಿ ಲಘು ಮಳೆಯಾಗಲಿದೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: ಪತ್ನಿಯ ಅಂತ್ಯಸಂಸ್ಕಾರಕ್ಕೆ ಬಾರದ ಪತಿ; ಮನೆ ಎದುರೇ ಶವ ಇಟ್ಟು ಮನೆ ಕಡೆ ನಡೆದ ಗ್ರಾಮಸ್ಥರು!

ನೈರುತ್ಯ ಮುಂಗಾರು ಮಂಗಳವಾರ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ.

ಸರಗೂರು (ಮೈಸೂರು ಜಿಲ್ಲೆ) 4; ಸಿಂಧನೂರು (ರಾಯಚೂರು ಜಿಲ್ಲೆ) 3; ಕೆರೂರು (ಬಾಗಲಕೋಟೆ ಜಿಲ್ಲೆ), ಲಿಂಗಸುಗೂರು, ಮುದಗಲ್ (ಎರಡೂ ರಾಯಚೂರು ಜಿಲ್ಲೆ) ತಲಾ 2 ಸೆಂ.ಮೀ ಮಳೆಯಾಗಿದೆ. ಮಂಕಿ (ಉತ್ತರ ಕನ್ನಡ ಜಿಲ್ಲೆ), ಸೇಡಬಾಳ (ಬೆಳಗಾವಿ ಜಿಲ್ಲೆ), ನರಗುಂದ (ಗದಗ ಜಿಲ್ಲೆ), ಬೇವೂರು (ಕೊಪ್ಪಳ ಜಿಲ್ಲೆ), ಬಾದಾಮಿ (ಬಾಗಲಕೋಟೆ ಜಿಲ್ಲೆ), ಬಿ.ಬಾಗೇವಾಡಿ, ನಲ್ವತವಾಡ, ತಾಳಿಕೋಟೆ (ಎಲ್ಲ ವಿಜಯಪುರ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version