Site icon Vistara News

Weather Report : ಬೆಂಗಳೂರು, ಮೈಸೂರು ಸೇರಿ ಹಲವೆಡೆ ಗುಡುಗು, ಮಿಂಚಿನ ಮಳೆ!

Woman with umbrella enjoys rain

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ (Weather report) ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಯಾದ ಬೆಳಗಾವಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಮಂಡ್ಯ, ಮೈಸೂರು ಸೇರಿ ರಾಮನಗರದಲ್ಲಿ ಚದುರಿದ ಮಳೆ

ದಕ್ಷಿಣ ಒಳನಾಡಿನ ಜಿಲ್ಲೆಯಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಸೇರಿದಂತೆ ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಗುಡುಗಿನ ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಜತೆಗೆ ಬಿರುಗಾಳಿ ಮುನ್ನೆಚ್ಚರಿಕೆ

ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಇದನ್ನೂ ಓದಿ: Assault Case: ಉಬರ್ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ! ಅಲ್ಲಿ ಏನಾಯಿತು?

ನೈರುತ್ಯ ಮುಂಗಾರು ಬುಧವಾರ ರಾಜ್ಯಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕೋಟ, ಶಿರಾಲಿ, ಕ್ಯಾಸಲ್ ರಾಕ್‌ನಲ್ಲಿ ತಲಾ 3ಸೆಂ.ಮೀ ಮಳೆಯಾಗಿದೆ. ಪಣಂಬೂರು, ಗೇರುಸೊಪ್ಪ, ಹೊನ್ನಾವರ, ಪೊನ್ನಂಪೇಟೆ, ವಿರಾಜಪೇಟೆ, ಚಿಕ್ಕಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಉಪ್ಪಿನಂಗಡಿ, ಸುಳ್ಯ, ಮಂಕಿ, ಗೋಕರ್ಣ, ಕುಮಟಾ, ಕದ್ರಾ , ಉಡುಪಿ, ಇಳಕಲ್, ಬಾಗಲಕೋಟೆ ಪಿಟಿಒ, ಮಸ್ಕಿ, ಮುದಗಲ್ , ನಾಪೋಕ್ಲು ಹಾಗೂ ಲಿಂಗನಮಕ್ಕಿ, ಚಿಕ್ಕನಹಳ್ಳಿ ಎಡಬ್ಲ್ಯುಎಸ್, ಕೊನೇಹಳ್ಳಿ ಕೆವಿಕೆ ತಲಾ 1 ಸಂ.ಮೀ ಮಳೆಯಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಗದಗ: 31 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 32 ಡಿ.ಸೆ – 25 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version