ಬೆಂಗಳೂರು: ಹವಾಮಾನ ಇಲಾಖೆಯು ಮತ್ತೆ ಮಳೆ (rain news) ಮುನ್ಸೂಚನೆಯನ್ನು ನೀಡಿದೆ. ನೈರುತ್ಯ ಮುಂಗಾರು ದುರ್ಬಲಗೊಂಡಿದ್ದರೂ ಕರಾವಳಿಯ ಹಲವು ಕಡೆ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ (weather report) ಸಾಧ್ಯತೆ ಇದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕದಿಂದ ಲಘು ಮಳೆಯಾದರೆ (Rain News), ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದ ಮಧ್ಯಮ ಮಳೆಯಾಲಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೊಮ್ಮೆ ಭಾರೀ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಇದನ್ನೂ ಓದಿ: Students fight : ಎಂಥಾ ಕಾಲ ಬಂತು! ಕ್ರಶ್ ಡೇಟ್ ಆಫ್ ಬರ್ತ್ ಹೇಳಿಲ್ಲ ಎಂದು ಹುಡುಗನಿಗೆ ಹೊಡೆಸಿದ ಪಿಯು ವಿದ್ಯಾರ್ಥಿನಿ!
ಬೆಂಗಳೂರಲ್ಲಿ ತುಂತುರು ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಯಾದ ದಾವಣಗೆರೆ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದ್ದು, ಉಳಿದ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಲ್ಲಿ ಕೆಲವೊಮ್ಮೆ ಬಿಸಿಲು ಇದ್ದರೆ ಮತ್ತೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಒಂದೆರಡು ಬಾರಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 31 ಡಿ.ಸೆ – 24 ಡಿ.ಸೆ
ಗದಗ: 29 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 21 ಡಿ.ಸೆ
ಬೆಳಗಾವಿ: 26 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 25 ಡಿ.ಸೆ
ಹೊನ್ನಾವರ: 30 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ