ಬೆಂಗಳೂರು: ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ (Rain Update) ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka rain news) ಸಾಧ್ಯತೆ ಇದೆ.
ಇತ್ತ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ನಗರದಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Road Accident in Bengaluru: ಅಪಘಾತಗಳ ನಗರಿ ಎಂಬ ಕುಖ್ಯಾತಿಗೆ ರಾಜಧಾನಿ ಗುರಿ; 3 ತಿಂಗಳಲ್ಲಿ 200ಕ್ಕೂ ಹೆಚ್ಚು ಮಂದಿ ಬಲಿ
ರಾಜ್ಯದಲ್ಲಿ ಶನಿವಾರ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.