ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಮುಂದುವರಿದಿದ್ದು, ಮೇ 3 ರಂದು ದಕ್ಷಿಣ ಒಳನಾಡಿನ (south Interior Karnataka) ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Karnataka rain) ಮುನ್ಸೂಚನೆಯನ್ನು (Weather Report) ಹವಾಮಾನ ಇಲಾಖೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ರಾಮನಗರದ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ ಹಾಗೂ ರಾಯಚೂರು, ಯಾದಗಿರಿ, ಕೊಪ್ಪಳದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Fraud Case: ಜೈಲಿನಿಂದ ಹೊರಬಂದ ಯುವರಾಜ್ ಸ್ವಾಮಿ ವಿರುದ್ಧ ಮತ್ತೆರಡು ವಂಚನೆ ಕೇಸ್ ದಾಖಲು
ತಾಪಮಾನ ಏರಿಕೆ
ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಮುಂದುವರಿದಿದ್ದರೆ ಇತ್ತ ಕರಾವಳಿಯಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಠಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.