ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು, ಧಾರವಾಡ, ವಿಜಯಪುರ, ಬಾಗೇಪಲ್ಲಿ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವಷ್ಟರ ಮಟ್ಟಿಗೆ ವರ್ಷಧಾರೆ ಸುರಿದಿದೆ. ರಾಜ್ಯದಲ್ಲಿ ಶನಿವಾರ ಮತ್ತು ಭಾನುವಾರವೂ ಗುಡುಗು ಸಹಿತ ಮಳೆಯಾಗುವ (Karnataka Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಉಕ್ಕಿದ ಹಳ್ಳಗಳು
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಒಂದು ಗಂಟೆಗಿಂದಲೂ ಹೆಚ್ಚು ಕಾಲ ವರ್ಷಧಾರೆ ಹರಿಯಿತು. ಚಿಕ್ಕಮಗಳೂರು ತಾಲೂಕಿನ ನಲ್ಲೂರು, ತೇಗೂರು, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ನಗರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಳೆಯ ಆರ್ಭಟಕ್ಕೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ.
ರೈತರ ಜಮೀನು ಜಲಾವೃತವಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಧಾರವಾಡ, ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ
ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಧಾರವಾಡದ ವಿದ್ಯಾಕಾಶಿಯಲ್ಲಿ ಆಲಿಕಲ್ಲು ಮಳೆ ಆಗಿದೆ. ಗಾಳಿ ಸಹಿತ ಗುಡುಗು ಸಿಡಿಲಿನಿಂದ ಕುಡಿದ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗುಡುಗು ಮಿಂಚು ಬಿರುಗಾಳಿ ಸಮೇತ ಆಗಿದೆ.
ಇದನ್ನೂ ಓದಿ: Assault Case: ಕೋರ್ಟ್‌ನಲ್ಲಿ ಹಿರಿಯ ವಕೀಲರಿಗೆ ಚಾಕು ಹಾಕಿದ ಮಹಿಳೆ; ಪರಾರಿ ಆದವಳ ಹುಡುಕಾಟದಲ್ಲಿ ಖಾಕಿ ಪಡೆ
ಚಿಕ್ಕಮಗಳೂರು ತಾಲೂಕಿನ ನಲ್ಲೂರು, ತೇಗೂರು, ಮುಳ್ಳಯ್ಯನಗಿರಿ, ಚಿಕ್ಕಮಗಳೂರು ನಗರದಲ್ಲಿ ಮಳೆ ಅಬ್ಬರಿಸಿದೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿದಿದೆ. ಮಳೆಯ ಆರ್ಭಟಕ್ಕೆ ರೈತರ ಜಮೀನು ಜಲಾವೃತವಾಗಿತ್ತು. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಮುಂದಿನ ಎರಡು ದಿನಗಳು ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆ ಮುನ್ಸೂಚನೆ?
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ರಾಯಚೂರು, ಯಾದಗಿರಿ ಹಾಗೂ ಕೊಪ್ಪಳ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್ ಸೇರಿದಂತೆ ಕೊಪ್ಪಳ ಜಿಲ್ಲೆಯಲ್ಲಿ ಗುಡುಗು, ಮಿಂಚಿನ (Latest Rain Alert) ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ, ಹಾಸನ, ಕೊಡಗು,ಮಂಡ್ಯ, ಮೈಸೂರು ಸೇರಿದಂತೆ ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಜತೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಭಾಗದಲ್ಲೂ ಮಳೆಯಾಗಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗರಿಷ್ಠ ಉಷ್ಣಾಂಶದ ಎಚ್ಚರಿಕೆ
ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗಲಿದೆ. ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.