Site icon Vistara News

Weather Report : ಸೆ.12ರಂದು ರಾಜ್ಯದ ಇಲ್ಲೆಲ್ಲ ಮಳೆ ನಿರೀಕ್ಷೆ

Boy holding an umbrella and walking with rain

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾದರೆ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಚದುರಿದ (Weather report) ಮಳೆಯಾಗಲಿದೆ. ದಕ್ಷಿಣ ಒಳನಾಡಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಭಾರಿ, ಮಲೆನಾಡಲ್ಲಿ ಲಘು ಮಳೆ

ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಂಗಳವಾರವೂ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.

ಇನ್ನು ಕಳೆದೆರಡು ದಿನಗಳಿಂದ ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿತ್ತು. ಈಗ ಮತ್ತೆ ಸಕ್ರಿಯವಾಗಿದ್ದು ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ ಸೇರಿದಂತೆ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಅಬ್ಬರ ಜೋರಾಗಿರಲಿದೆ.

ಉಳಿದ ಪ್ರದೇಶದಲ್ಲಿ ಅತಿ ಕಡಿಮೆ ಮಳೆಯಾಗುವ ಸಂಭವವಿದೆ. ಆದರೆ ಉತ್ತರ ಒಳನಾಡಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಮಳೆಯಾಗಲಿದೆ. ಜತೆಗೆ ಒಳನಾಡಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ಮರದಡಿ, ಶಿಥಲಗೊಂಡಿರುವ ಕಟ್ಟಡದಲ್ಲಿ ಇರದಂತೆ ಸೂಚಿಸಲಾಗಿದೆ.

ಬೆಂಗಳೂರಲ್ಲಿ ಥಂಡಿ ವಾತಾವರಣ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಅಲ್ಲಲ್ಲಿ ಅತಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 29 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 23 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 12ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0421.3336863747
ಆಲಮಟ್ಟಿ ಜಲಾಶಯ
(Almatti Dam)
519.6114.08011285
ಮಲಪ್ರಭಾ ಜಲಾಶಯ (Malaprabha Dam)633.8021.610194
ಘಟಪ್ರಭಾ ಜಲಾಶಯ
(Ghataprabha Dam)
662.9141.71597177
ತುಂಗಾಭದ್ರಾ ಜಲಾಶಯ (Tungabhadra Dam)497.7169.17295910326
ಭದ್ರಾ ಜಲಾಶಯ (Bhadra Dam)657.7344.566522492
ಕಬಿನಿ ಜಲಾಶಯ (Kabini Dam)696.1314.7247263490
ಹಾರಂಗಿ
(Harangi Dam)
871.388.193344100
ಲಿಂಗನಮಕ್ಕಿ (Linganamakki Dam) 554.4467.3226443249
ಹೇಮಾವತಿ
(Hemavathi Dam)
890.5819.908966030

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version