ಬೆಂಗಳೂರು: ರಾಜ್ಯದ ವಿವಿಧೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆಯನ್ನು ನೀಡಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಮತ್ತು ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗರಿಷ್ಠ ಉಷ್ಣಾಂಶವು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಸೋಮವಾರ ರಾಜ್ಯಾದ್ಯಂತ ಒಣ ಹವೆ ಇತ್ತು. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 40.2 ಡಿಗ್ರಿ ಸೆಲ್ಸಿಯಸ್ ಕಲಬುರುಗಿಯಲ್ಲಿ ದಾಖಲಾಗಿದೆ.
ಇದನ್ನೂ ಓದಿ: Murder Case: ಆಸ್ತಿ ಕಲಹ: ಆಸ್ಪತ್ರೆಗೆ ನುಗ್ಗಿ ಅಣ್ಣನಿಗೆ ಚಾಕು ಹಾಕಿದ ತಮ್ಮ; ಇಬ್ಬರು ಆರೋಪಿಗಳ ಬಂಧನ
ಮಂಗಳವಾರ ರಾಜ್ಯದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಮಳೆ ಆಗಿದೆ. ಮೈಸೂರಿನ ಹುಣಸೂರು ಬಳಿಯ ಬಿಳಿಗೆರೆಯಲ್ಲಿ 16 ಮಿಮೀ ಮಳೆಯಾಗಿದೆ.