ಬೆಂಗಳೂರು: ಬೆಂಗಳೂರಿನಲ್ಲಿಂದು ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಕೂಡ ಸಾಥ್ ಕೊಡಲಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯ ಕೆಲವು ಕಡೆ ಮಳೆಯಾಗಬಹುದು. ಉತ್ತರ ಒಳನಾಡಿನ ಜಿಲ್ಲೆಯಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕೊಪ್ಪಳ, ವಿಜಯಪುರದ ಕೆಲವೊಂದು ಕಡೆ ಜಿಟಿ ಜಿಟಿ ಮಳೆಯಾಗಲಿದೆ. ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ಯಾವುದೇ ಮಳೆ ಸೂಚನೆ ಇಲ್ಲ, ಒಣಹಣೆ ಇರಲಿದೆ.
ದಕ್ಷಿಣ ಒಳನಾಡಿ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನ ಕೆಲವು ಕಡೆಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರದಲ್ಲಿ ಒಣಹವೆ ಇರಲಿದೆ.
ಇದನ್ನೂ ಓದಿ: Himachal Pradesh: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ ಏಳು ಜನ ಬಲಿ; ಪ್ರವಾಹಕ್ಕೆ ಕೊಚ್ಚಿಹೋದ ಬದುಕು
ರಾಜ್ಯದಲ್ಲಿ ನೈರುತ್ಯ ಮುಂಗಾರು ಭಾನುವಾರ ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ರಾಮನಗರದ ಕನಕಪುರದಲ್ಲಿ 2 ಹಾಗೂ ಉತ್ತರ ಕನ್ನಡದ ಮಂಕಿ ಹಾಗೂ ಉಡುಪಿಯಲ್ಲಿ ತಲಾ 1ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ