Site icon Vistara News

Weather Report : ತಿಂಗಳಾಂತ್ಯದವರೆಗೆ ರಾಜ್ಯದಲ್ಲಿ ತುಂತುರು ಮಳೆ

yellow umbrella with bench

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಯೊಳಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಣ್ಣ ಮಳೆಯಾಗುವ (Rain news) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಕೆಲವು ಕಡೆ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಕರಾವಳಿ ಭಾಗವಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಲಘು ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಜಿಟಿ ಜಿಟಿ ಮಳೆ ಬೀಳಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿಯಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉಳಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆಯಲ್ಲಿ ಶುಷ್ಕ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿಯಲ್ಲಿ ಒಣಹವೆ ಇರಲಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಬಿಸಿಲು ಇದ್ದರೆ ಮಧ್ಯಾಹ್ನದ ಹೊತ್ತು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ – 22 ಡಿ.ಸೆ
ಮಂಗಳೂರು: 31 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 21 ಡಿ.ಸೆ
ಗದಗ: 33 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ

ಆಗಸ್ಟ್‌ 28ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0424.6024617371
ಆಲಮಟ್ಟಿ ಜಲಾಶಯ
(Almatti Dam)
519.6122.3101461
ಮಲಪ್ರಭಾ ಜಲಾಶಯ (Malaprabha Dam)633.8023.01694694
ಘಟಪ್ರಭಾ ಜಲಾಶಯ
(Ghataprabha Dam)
662.9141.767184841
ತುಂಗಾಭದ್ರಾ ಜಲಾಶಯ (Tungabhadra Dam)497.7180.31120610299
ಭದ್ರಾ ಜಲಾಶಯ (Bhadra Dam)657.7348.198043223
ಕಬಿನಿ ಜಲಾಶಯ (Kabini Dam)696.1314.1514224325
ಹಾರಂಗಿ
(Harangi Dam)
871.388.137531700
ಲಿಂಗನಮಕ್ಕಿ (Linganamakki Dam) 554.4472.0231197434
ಹೇಮಾವತಿ
(Hemavathi Dam)
890.5826.897165030
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version