ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಜಿಟಿಜಿಟಿ ಮಳೆಯಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿನಿಂದ ಕೂಡಿರುತ್ತದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಭಾನುವಾರ ಕೋಲಾರ, ಹೊಸಕೋಟೆ, ದೇವನಹಳ್ಳಿ ತಲಾ 2 ಸೆ.ಮಿ, ಉಪ್ಪಿನಂಗಡಿ, ಚಿಂತಾಮಣಿ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ಜಿಕೆವಿಕೆ, ಮಾಗಡಿ, ಬೆಂಗಳೂರು ನಗರದಲ್ಲಿ ತಲಾ 1 ಸೆ.ಮಿ ಮಳೆಯಾಗಿರುವ ವರದಿಯಾಗಿದೆ. ರಾಜ್ಯದಲ್ಲಿ ಹೊನ್ನಾವರದಲ್ಲಿ ಗರಿಷ್ಠ ಉಷ್ಣಾಂಶ 35.0 ಡಿಗ್ರಿ ಸೆಲಿಯಸ್ ದಾಖಲಾಗಿದ್ದರೆ, ಬೀದರ್‌ನಲ್ಲಿ ಕನಿಷ್ಠ ಉಷ್ಣಾಂಶ 11.0 ಡಿಗ್ರಿ ಸೆಲಿಯಸ್ ದಾಖಲಾಗಿದೆ.
ಇದನ್ನೂ ಓದಿ | Pothole | ಬೆಂಗಳೂರು ರಸ್ತೆ ಗುಂಡಿಯಿಂದಾಗಿ ಬೈಕ್ ಸವಾರ ಸಾವು