ಬೆಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೆರಡು ದಿನ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಹಾವೇರಿ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಧಾರವಾಡ, ಗದಗ ಮತ್ತು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Public safety: ಸಿಟಿಗೆ ಸೇಫ್ಟಿ ಐಲ್ಯಾಂಡ್ ಎಂಟ್ರಿ; ಬಟನ್ ಒತ್ತಿದ್ದರೆ ಪೊಲೀಸರು ಬರೋದು ಗ್ಯಾರಂಟಿ
ಗುಡುಗು ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚಿನ ಮಳೆಯಾಗಲಿದೆ. ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹಾಗೂ ಕೆಲವು ಕಡೆಗಳಲ್ಲಿ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ (Fisheries warning) ಸೂಚಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ