ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಲ್ಲಿ ಭಾರೀ ಮಳೆ ಸೂಚನೆ ಇದ್ದರೆ, ಮಲೆನಾಡಿನ ಕೆಲವು ಕಡೆ ಚದುರಿದ (Weather report) ಮಳೆಯಾಗಲಿದೆ. ದಕ್ಷಿಣ ಒಳನಾಡಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗಿನ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೊಡಗು, ಹಾಸನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ.
ಉತ್ತರ ಒಳನಾಡಲ್ಲಿ ಮಳೆ ಅಬ್ಬರ
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ ಸೇರಿದಂತೆ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಅಬ್ಬರ ಜೋರಾಗಿರಲಿದೆ. ಉಳಿದ ಪ್ರದೇಶದಲ್ಲಿ ಅತಿ ಕಡಿಮೆ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಮಳೆಯಾಗಲಿದೆ. ಜತೆಗೆ ಒಳನಾಡಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.
ಇದನ್ನೂ ಓದಿ: Love Case : ಪ್ರೀತಿಸುವಂತೆ ವಿವಾಹಿತೆಗೆ ಜೈಲಿನಿಂದಲೇ ಪಾಗಲ್ ಪ್ರೇಮಿ ಬ್ಲ್ಯಾಕ್‌ಮೇಲ್!
ದಕ್ಷಿಣ ಒಳನಾಡಲ್ಲಿ ಸಾಧಾರಣ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಅಲ್ಲಲ್ಲಿ ಅತಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇಲ್ಲೆಲ್ಲ ಮಳೆಯ ಸಿಂಚನ
ಸೆ.10ರಂದು ಕಾರ್ಕಳದಲ್ಲಿ 6 ಸೆಂ.ಮೀ, ಧರ್ಮಸ್ಥಳ, ಉಡುಪಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಾಣಿ, ಪುತ್ತೂರು, ಕುಂದಾಪುರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಕೋಟ, ಕುಮಟಾ, ಕ್ಯಾಸಲ್ ರಾಕ್, ಔರಾದ್‌ನಲ್ಲಿ ತಲಾ 3 ಹಾಗೂ ಮಂಗಳೂರು, ಬೆಳ್ತಂಗಡಿ, ಗೇರುಸೊಪ್ಪ, ಮಂಕಿ, ಗೋಕರ್ಣ, ಫರ್ಹತಾಬಾದ್ , ಲಿಂಗನಮಕ್ಕಿ, ತಾಳಗುಪ್ಪ , ಶೃಂಗೇರಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮೂಲ್ಕಿ, ಉಪ್ಪಿನಂಗಡಿ, ಸುಳ್ಯ, ಸಿದ್ದಾಪುರ, ಶಿರಾಲಿ, ಹೊನ್ನಾವರ, ಕದ್ರಾ, ಸಿದ್ದಾಪುರ, ಬೇಲಿಕೇರಿ, ಬೀದರ್, ಬೀದರ್ ಪಿಟಿಒ, ಆಳಂದ, ಚಿತ್ತಾಪುರ ಸೇರಿದಂತೆ ಝಲ್ಕಿ, ಅಡಕಿ, ಮುಧೋಳ, ತ್ಯಾಗರ್ತಿ, ಕೊಟ್ಟಿಗೆಹಾರ, ಜಯಪುರ, ಕಮ್ಮರಡಿ, ಕೊಪ್ಪ, ಮಡಿಕೇರಿ ಎಡಬ್ಲ್ಯೂಎಸ್, ಗೋಣಿಕೊಪ್ಪಲು ಕೆವಿಕೆ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ