Site icon Vistara News

Weather Report : ವಾರಾಂತ್ಯದಲ್ಲಿ ಇಲೆಲ್ಲ ವರ್ಷಾಧಾರೆ ಸಾಧ್ಯತೆ

girl standing in front of beach with holding umbreala

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಮಲೆನಾಡು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಸಾಲು ಸಾಲು ರಜೆ ಹಿನ್ನೆಲೆ ಮೋಜು ಮಸ್ತಿ ಮಾಡುವವರಿಗೆ ವರುಣ ಅಡ್ಡಿ ಆಗಬಹುದು.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಗುಡುಗಲಿರುವ ವರುಣ

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ನಗರ, ಮಂಡ್ಯ, ಕೋಲಾರ ಸೇರಿದಂತೆ ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಕೆಲವು ಕಡೆ ಒಣಹವೆ ಇರಲಿದೆ. ಇನ್ನು ಬೆಂಗಳೂರು ಸುತ್ತಮುತ್ತ ಕೆಲವೊಮ್ಮೆ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸೂರ್ಯನ ದರ್ಶನ ಇರಲಿದೆ. ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bangalore Power Cut : ಗಮನಿಸಿ, ನಾಳೆ ಭಾನುವಾರ ಆದ್ರೂ ಬೆಂಗಳೂರಿನ ಈ ಏರಿಯಾಗಳಲ್ಲಿ 5 ಗಂಟೆ ಕರೆಂಟೇ ಇರಲ್ಲ

ರಾಜ್ಯದಲ್ಲಿ ಶುಕ್ರವಾರದಂದು ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಆದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ 5 ಸೆಂ.ಮೀ ಮಳೆಯಾಗಿದೆ. ಬಿ ಬಾಗೇವಾಡಿ, ಚಾಮರಾಜನಗರ, ಹರದನಹಳ್ಳಿ ಕೆವಿಕೆ ತಲಾ 4 ಸೆಂ.ಮೀ ಮಳೆಯಾಗಿದೆ.

ಕಕ್ಕೇರಿ, ಜಯಪುರ, ಶ್ರೀರಂಗಪಟ್ಟಣ ತಲಾ 3 ಹಾಗೂ ಝಲ್ಕಿ ಕ್ರಾಸ್, ಯಡ್ರಾಮಿ, ಕನಕಪುರ, ಕೊಟ್ಟಿಗೆಹಾರ, ಮಂಡ್ಯ, ಕೊಳ್ಳೇಗಾಲದಲ್ಲಿ ತಲಾ 2ಸೆಂ.ಮೀ ಮಳೆಯಾಗಿದೆ. ಕೋಟ, ಮುಂಡಗೋಡು, ಕ್ಯಾಸಲ್ ರಾಕ್, ಮಂಚಿಕೆರೆ, ಕೆರೂರು, ರೋಣ, ಮೈಸೂರು, ಸಕಲೇಶಪುರ , ಸಿರುಗುಪ್ಪ, ರಾಯಲ್ಪಾಡು ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 22 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version