Site icon Vistara News

Weather Report: ಉತ್ತರ ಒಳನಾಡಿನಲ್ಲಿ ವರುಣನಿಗೆ ವಿರಾಮ; ಕರಾವಳಿ, ದಕ್ಷಿಣ ಒಳನಾಡಲ್ಲಿ ಮುಂದುವರಿದ ಮಳೆ

Bangalore Rain

#image_title

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗುವ (Weather report) ಸಾಧ್ಯತೆ ಇದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ವ್ಯಾಪಕ ಮಳೆಯಾಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Cooker Blast:‌ ರಾಮನಗರದಲ್ಲಿ ಎಲೆಕ್ಷನ್‌ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್‌ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ರಾಯಚೂರಿನಲ್ಲಿ ತಾಪಮಾನ ಏರಿಕೆ; ರಾಜ್ಯಾದ್ಯಂತ ಮಳೆ ಅಬ್ಬರ

ರಾಜ್ಯದಲ್ಲಿ ಗುರುವಾರ ಮಳೆಯಾಗಿದ್ದು, ಇದರ ನಡುವೆಯೂ ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ 5, ಕೊಳ್ಳೇಗಾಲ, ಕೊಣನೂರು, ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಸುಬ್ರಹ್ಮಣ್ಯ, ನಾಪೋಕ್ಲು, ಮದ್ದೂರು, ತುಮಕೂರಲ್ಲಿ ತಲಾ 3, ಬುಕ್ಕಪಟ್ಟಣ, ಹೊಸದುರ್ಗದಲ್ಲಿ ತಲಾ 2ಸೆಂ.ಮೀ ಮಳೆಯಾಗಿದೆ. ಹುಣಸೂರು, ಮಧುಗಿರಿ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಚಿಕ್ಕಮಗಳೂರು, ಕೊಟ್ಟಿಗೆಹಾರ , ಚಂದೂರಾಯನಹಳ್ಳಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version