ಬೆಂಗಳೂರು: ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಮಳೆಯು (Weather Report) ಅಬ್ಬರಿಸಲಿದೆ. ಕೆಲವೆಡೆ ಬಿರುಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಮುಂದಿನ ಎರಡು ದಿನಗಳು ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ (Karnataka Rain) ಆಗಲಿದೆ. ಈ ಬಗ್ಗೆ ಹವಾಮಾನ ಇಲಾಖೆ (Weather Updates) ಮುನ್ಸೂಚನೆಯನ್ನು ನೀಡಿದೆ. ಇಷ್ಟು ದಿನ ದಕ್ಷಿಣ ಒಳನಾಡಿನಲ್ಲಿ ವರುಣ ಅಬ್ಬರಿಸಿದ್ದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆಯಿಂದ ಇತ್ತು.
ಇದೀಗ ಏಪ್ರಿಲ್ 7 ಮತ್ತು 8ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ ಹಾಗೂ ಧಾರವಾಡ, ಕಲಬುರುಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗದಲ್ಲಿ ಮಳೆ ಅಬ್ಬರಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆ ಸಾಧ್ಯತೆ
ಉತ್ತರ ಒಳನಾಡಿನ ಬೀದರ್, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ.
ಇದನ್ನೂ ಓದಿ: Leopard Attack: ಕೊಟ್ಟಿಗೆಗೆ ನುಗ್ಗಿ ಹತ್ತಕ್ಕೂ ಹೆಚ್ಚು ಕುರಿ, ಮೇಕೆಗಳ ಬಲಿ ಪಡೆದ ಚಿರತೆಗಳು
ಬೆಂಗಳೂರಲ್ಲಿ ಮಳೆ ಅಬ್ಬರ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಇತ್ತ ಬುಧವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.