Site icon Vistara News

Weather Report: ಮುಂದುವರಿಯಲಿದೆ ವರುರ್ಣಾಭಟ, ಇರಲಿ ಎಚ್ಚರ; ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೆರಡು ದಿನ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ (Weather Report) ಇಲಾಖೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Weather Update) ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ, ಚಾಮರಾಜನಗರ, ಮೈಸೂರು, ರಾಮನಗರ ಸೇರಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ

ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಇತ್ತ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯೊಂದಿಗೆ ಗುಡುಗು ಮಿಂಚಿನ ಸಾಧ್ಯತೆ ಇದೆ.

ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Road Accident: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸಾವು; ಭೀಕರ ಅಪಘಾತದಲ್ಲಿ ಚಾಲಕ ದುರ್ಮರಣ

ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ ದಾಖಲು

ರಾಜ್ಯದಲ್ಲಿ ಬುಧವಾರ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ. ಚಿತ್ರದುರ್ಗದಲ್ಲಿ 7 ಸೆಂ.ಮೀ, ನಾಪೋಕ್ಲು 6 ಮಳೆಯಾಗಿದೆ. ರಾಣಿಬೆನ್ನೂರು, ರಾಯಲಪಾಡು, ನಾಯಕನಹಟ್ಟಿ ತಲಾ 3 ಸೆಂ.ಮೀ ಹಾಗೂ ಸೇಡಂ, ಸರಗೂರು, ಚಿತ್ರದುರ್ಗದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಮಂಗಳೂರು ವಿಮಾನ ನಿಲ್ದಾಣ, ಕುಮಟಾ, ನರಗುಂದ, ಕುಷ್ಟಗಿ, ತಾಳಿಕೋಟೆ, ಬೆಂಗಳೂರು ಕೆಐಎಎಲ್, ಹೊಸಕೋಟೆ, ಚನ್ನಗಿರಿ, ಹಿರಿಯೂರು ಹಾಗೂ ಚಿಂತಾಮಣಿ ಪಿಟಿಒ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version