Site icon Vistara News

Weather report: ಸೋಮವಾರ ಇರಲಿದೆ ಬಿರುಗಾಳಿ ಸಹಿತ ಮಳೆಯ ಅಬ್ಬರ; ವಾಹನ ಚಾಲನೆಯಲ್ಲಿರಲಿ ಎಚ್ಚರ

Belagavi Rain Effect

ಬೆಂಗಳೂರು: ರಾಜಧಾನಿ ಬೆಂಗಳೂರು (Bangalore Rain) ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ (Weather update) ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದೆ.

ಇತ್ತ ಬೆಂಗಳೂರಲ್ಲಿ ಮುಂಜಾನೆ ಹೊತ್ತು ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿ ಸಹಿತ ಗುಡುಗು, ಮಿಂಚಿನೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ ಹಾಗೂ ಚಾಮರಾಜನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬೀದರ್ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಇರಲಿದೆ.

ಈ ಜಿಲ್ಲೆಗಳಲ್ಲಿ ಭಾನುವಾರ ಮಳೆ ಎಚ್ಚರಿಕೆ

ಭಾನುವಾರ (ಮೇ 28) ಸಂಜೆ ಅಥವಾ ರಾತ್ರಿಯ ಸಮಯ ಹಾಸನ, ಯಾದಗಿರಿ, ರಾಮನಗರ ಚಿತ್ರದುರ್ಗ, ವಿಜಯನಗರ, ದಾವಣಗೆರೆ, ಬೀದರ್ ಮತ್ತು ಕಲಬುರಗಿಯಲ್ಲಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 30- 40 ಕಿ.ಮೀ ವ್ಯಾಪ್ತಿಯಲ್ಲಿ ಇರುತ್ತದೆ. ಹೀಗಾಗಿ ಈ ಸಮಯದಲ್ಲಿ ವಾಹನ ಸವಾರರು ಜಾಗ್ರತೆ ವಹಿಸುವಂತೆ ಸಲಹೆ ನೀಡಲಾಗಿದೆ.

ಇದನ್ನೂ ಓದಿ: Drowned: ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಯುವಕ ನೀರುಪಾಲು; ಕಾಡಾನೆ ದಾಳಿಗೆ ಮಹಿಳೆ ಬಲಿ

ಜತೆಗೆ ಚಾಮರಾಜನಗರ, ಮೈಸೂರು, ಗದಗ, ಧಾರವಾಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ, ಬೆಳಗಾವಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಿಢೀರ್‌ ಮಳೆಯಿಂದ ತಪ್ಪಿಸಿಕೊಳ್ಳಲು ಕುರ್ಚಿಗಳ ಆಸರೆ ಪಡೆದ ಕಾಂಗ್ರೆಸ್‌ ಕಾರ್ಯಕರ್ತರು

ಬೆಳಗಾವಿಯಲ್ಲಿ ಕೈ ಕಾರ್ಯಕರ್ತರ ಸಂಭ್ರಮಕ್ಕೆ ಮಳೆ ಅಡ್ಡಿ

ಭಾನುವಾರ ಬೆಳಗಾವಿಯಲ್ಲಿ ಸಚಿವರ ತೆರೆದ ವಾಹನ ಮೆರವಣಿಗೆಗೆ ಮಳೆರಾಯನ ಅಡ್ಡಿಯಾಗಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್‌‌ಗೆ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಲು ಮುಂದಾಗಿದ್ದರು. ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಕಾರ್ಯಕರ್ತರು ಜಮಾಯಿಸಿದ್ದರು. ಆದರೆ ಏಕಾಏಕಿ ಧಾರಾಕಾರ ಮಳೆ ಹಿನ್ನೆಲೆ ಕಾಂಗ್ರೆಸ್ ಭವನ, ಟೀ ಸ್ಟಾಲ್ ಕೆಳಗೆ ಆಸರೆ ಪಡೆದರು. ಮಾತ್ರವಲ್ಲದೇ ಕೂರಲು ಹಾಕಿದ್ದ ಕುರ್ಚಿಗಳನ್ನು ಹಿಡಿದು ನಿಂತಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version