Site icon Vistara News

Weather Report: ರಾಜ್ಯದಲ್ಲಿ ಇನ್ನೂ ಎರಡು ದಿನ ವರುಣಾರ್ಭಟ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್?‌

Rain

#image_title

ಬೆಂಗಳೂರು: ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಸೇರಿದಂತೆ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ವರುಣ (Bengaluru Rain) ಅಬ್ಬರಿಸಲಿದ್ದಾನೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ, ಯಾದಗಿರಿ ಹಾಗೂ ಬಳ್ಳಾರಿ, ವಿಜಯನಗರ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರಲ್ಲಿ ವ್ಯಾಪಕ ಮಳೆಯಾಗಲಿದೆ. ಕೊಡಗು ಮತ್ತು ಹಾಸನ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bengaluru Rain : ಅಂಡರ್‌ಪಾಸ್‌ ದುರಂತಕ್ಕೆ ಎಚ್‌ಡಿಕೆ ಆಕ್ರೋಶ; ಮಳೆ ಬಂದರೆ ಸಾವೇ ಗತಿಯಾ?

ಗರಿಷ್ಠ ಉಷ್ಣಾಂಶದ ಮುನ್ಸೂಚನೆ

ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆ ತಂದ ಅವಾಂತರ

ರಾಜಧಾನಿ ಬೆಂಗಳೂರಲ್ಲಿ ಭಾನುವಾರ ಸುರಿದ ಮಳೆಯು ನಾನಾ ಅವಾಂತರವನ್ನೇ ಸೃಷ್ಟಿಸಿದೆ. ಪೊಲೀಸ್ ಆಯುಕ್ತರ ಕಚೇರಿಗೆ ಸಂಪರ್ಕ ಕಲ್ಪಿಸುವ ಅಲಿ ಅಸ್ಕರ್ ರಸ್ತೆಯಲ್ಲಿ ಮರವೊಂದು ಧರೆಗುರುಳಿತ್ತು. ಖಾಸಗಿ ಕಂಪನಿಯ ಕಾಂಪೌಂಡ್‌‌ನಿಂದ ರಸ್ತೆಗೆ ಮರ ಬಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ. ವಸಂತ ನಗರದ ಶಾಂಘ್ರೀಲಾ ಹೋಟೆಲ್‌ ರಸ್ತೆಯೂ ಜಲಾವೃತಗೊಂಡಿತ್ತು. ಇತ್ತ ಆರ್.ಟಿ.ನಗರದಲ್ಲಿ ಭಾರಿ ಮಳೆಗೆ ಮರವೊಂದು ರಸ್ತೆಯ ಮಧ್ಯ ಭಾಗಕ್ಕೆ ಬಿದ್ದಿದ್ದರಿಂದ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಎರಡು ಬದಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿದ್ದವು.

ಮಳೆಗೆ ಮುಳುಗಿದ ಕಾರು

ಕೆಲವು ತಗ್ಗು ಪ್ರದೇಶದ ಮನೆಗಳಿಗೂ ನೀರು ನುಗ್ಗಿ ಜನರು ಪರದಾಡಬೇಕಾಯಿತು. ಮಹಾಲಕ್ಷ್ಮಿ ಲೇಔಟ್‌ನ ಗಣೇಶ ಬ್ಲಾಕ್‌ನಲ್ಲಿರುವ 9 ಮನೆಗಳಿಗೆ ನೀರು ನುಗ್ಗಿತ್ತು. ಪಕ್ಕದಲ್ಲಿದ್ದ ರಾಜಕಾಲುವೆ ಉಕ್ಕಿ ಒಳಚರಂಡಿ ನೀರು ಮನೆಗಳಿಗೆ ನುಗ್ಗಿತ್ತು. ನೀರು ಒಳಗೆ ಹಾಕುವುದೆ ಮನೆಯ ಸದಸ್ಯರಿಗೆ ಕಾಯಕವಾಗಿತ್ತು. ಮಾತ್ರವಲ್ಲದೆ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳೆಲ್ಲವೂ ಮುಳುಗಡೆಯಾಗಿತ್ತು. ಹೊರಗೆ ಹೋಗಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೈಕ್‌ಗಳು ನೀರಲ್ಲಿ ಮುಳುಗಡೆ

ಕುಸಿದ ಹಳೇ ಕಟ್ಟಡ

ವಿದ್ಯಾರಣ್ಯಪುರ ದೊಡ್ಡ ಬೊಮ್ಮಸಂದ್ರ ಬಳಿ ಭಾರಿ ಮಳೆಗೆ ಹಳೆಯ ಕಟ್ಟಡ ಕುಸಿದಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದು ಬಂದಿದೆ. ಹಳೆಯ ಕಟ್ಟಡವಾದ ಕಾರಣ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಕಟ್ಟಡದಲ್ಲಿ ಒಂದೇ ಕುಟುಂಬ ವಾಸವಾಗಿತ್ತು.

ಭಾರಿ ಮಳೆಗೆ ಕಟ್ಟಡ ಕುಸಿತ

ಕಟ್ಟಡ ಕುಸಿತವಾಗುತ್ತಿದ್ದಂತೆ ಎಲ್ಲರೂ ಹೊರ ಬಂದಿದ್ದಾರೆ. ಸ್ಥಳದಲ್ಲಿ ಬಿಬಿಎಂಪಿ ಹಾಗೂ ಸಿವಿಲ್ ಡಿಫೆನ್ಸ್ ಹಾಗೂ ರಕ್ಷಣಾ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version