ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಕಲಬುರಗಿ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿಯ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಈ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 30-40ಕಿ.ಮೀ ಇರಲಿದೆ. ಹೀಗಾಗಿ ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜತೆಗೆ ಮರದಡಿ ನಿಲ್ಲದಂತೆ ಎಚ್ಚರಿಕೆಯನ್ನು ನೀಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೈಸೂರಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದರೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೀದರ್, ಬಾಗಲಕೋಟೆ, ಕೊಪ್ಪಳ, ವಿಜಯಪುರ ಹಾಗೂ ರಾಯಚೂರು, ಕಲಬುರಗಿ, ಧಾರವಾಡ, ಗದಗ, ಹಾವೇರಿಯಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೀನುಗಾರರಿಗೆ ಮುಂದುವರಿದ ಅಲರ್ಟ್
ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ನಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.
ಬೆಂಗಳೂರಲ್ಲಿ ವಿಕೆಂಡ್‌ನಲ್ಲಿ ಭರ್ಜರಿ ಮಳೆ
ಪೀಣ್ಯ ಕೈಗಾರಿಕಾ ಪ್ರದೇಶ – 29.50 ಮಿ.ಮೀ, ಬಾಗಲಗುಂಟೆ – 28.50 ಮಿ.ಮೀ, ಶೆಟ್ಟಿಹಳ್ಳಿ – 27.50 ಮಿ.ಮೀ, ದೊಡ್ಡಬಿದರೆಕಲ್ಲು – 25.50 ಮಿ.ಮೀ ಹಾಗೂ ನಂದಿನಿ ಲೇಔಟ್ ಮತ್ತು ನಾಗಪುರದಲ್ಲಿ ತಲಾ – 21 ಮಿ.ಮೀ ಮಳೆಯಾಗಿದೆ. ಕೊಟ್ಟಿಗೆಪಾಳ್ಯ – 20.50 ಮಿ.ಮೀ, ಹೆಗ್ಗನಹಳ್ಳಿ ಮತ್ತು ರಾಜಮಹಲ್ ಗುಟ್ಟಹಳ್ಳಿ ತಲಾ – 18 ಮಿ.ಮೀ, ಹೊರಮಾವು – 13.50 ಮಿ.ಮೀ, ಹೆರೋಹಳ್ಳಿ – 13.50 ಮಿ.ಮೀ ಮಳೆಯಾಗಿರುವ ವರದಿಯಾಗಿದೆ. ದಯಾನಂದನಗರ, ರಾಜಾಜಿನಗರದಲ್ಲಿ ತಲಾ – 13 ಮಿ. ಮೀ, ಮಾರಪ್ಪಪಾಳ್ಯ, ವಿದ್ಯಾರಣ್ಯಪುರ ತಲಾ – 11.50 ಮಿ.ಮೀ ಮಳೆಯಾಗಿದ್ದರೆ, ಜಕ್ಕೂರು, ಯಲಹಂಕದಲ್ಲಿ ತಲಾ – 10.50 ಮಿ.ಮೀ, ಕೊಡಿಗೇಹಳ್ಳಿ, ಬಾಣಸವಾಡಿಯಲ್ಲಿ 10 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: Youth drowned: ಗೆಳೆಯನ ಜತೆ ಮೀನು ಹಿಡಿಯಲು ಹೋದ ಯುವಕ ತೆಪ್ಪ ಮಗುಚಿ ನೀರುಪಾಲು
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 34 ಡಿ.ಸೆ – 24 ಡಿ.ಸೆ
ಗದಗ: 31 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31ಡಿ.ಸೆ – 21 ಡಿ.ಸೆ
ಬೆಳಗಾವಿ: 30 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 23 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ಬೆಳಗಾವಿಯಲ್ಲಿ ಚುರುಕುಗೊಂಡ ಮುಂಗಾರು
ಬೆಳಗಾವಿಯಲ್ಲಿ ಮುಂಗಾರು ಚುರುಕಾಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ನಗರದಲ್ಲಿ ಮಳೆಯಾಗುತ್ತಿದೆ. ಕಳೆದ 20 ದಿನದಿಂದ ಮಳೆಗಾಗಿ ಕಾಯುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮುಂಗಾರು ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತಾಪಿ ವರ್ಗದವರು, ಕಪ್ಪೆ ಮದುವೆ, ಕತ್ತೆ ಮದುವೆ ಸೇರಿ ವಿವಿಧ ಸಂಪ್ರದಾಯ ಆಚರಣೆ ಮಾಡಿದ್ದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ