ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲಿ ಬುಧವಾರ (ನ.16) ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.
ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಜತೆಗೆ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.
ಮಂಗಳವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಪಣಂಬೂರು 4 ಸೆಂ.ಮೀ, ದೇವನಹಳ್ಳಿ 3, ಬೆಳ್ತಂಗಡಿ, ಧರ್ಮಸ್ಥಳ, ಬ್ರಹ್ಮಾವರ ಎಡಬ್ಲ್ಯುಎಸ್, ಚಿಂತಾಮಣಿಯಲ್ಲಿ ತಲಾ 2 ಸೆಂ.ಮೀ ಹಾಗೂ ಮಂಗಳೂರು ವಿಮಾನ ನಿಲ್ದಾಣ, ಪುತ್ತೂರು, ಕಾರ್ಕಳ, ಬೆಂಗಳೂರು ಕೆಐಎಎಲ್ ವಿಮಾನ ನಿಲ್ದಾಣ, ದೊಡ್ಡಬಳ್ಳಾಪುರ ತಲಾ 1 ಸೆಂ.ಮೀ. ಮಳೆಯಾಗಿದೆ. ಬೀದರ್‌ನಲ್ಲಿ ಅತಿ ಕನಿಷ್ಠ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇದನ್ನೂ ಓದಿ | ವಿದೇಶದಲ್ಲೂ ಮೊಳಗಿತು ಕನ್ನಡ ಕಹಳೆ