ಬೆಂಗಳೂರು: ಕರಾವಳಿಯಲ್ಲಿ ನೈರುತ್ಯ ಮುಂಗಾರು (Southwest monsoon) ತೀವ್ರಗೊಂಡಿದ್ದು, ಬುಧವಾರ ಒಂದೇ ದಿನ ದಕ್ಷಿಣ ಕನ್ನಡದ ಮೂಲ್ಕಿಯಲ್ಲಿ 33 ಸೆಂ.ಮೀ ಮಳೆಯಾಗಿರುವ (Rain News) ವರದಿಯಾಗಿದೆ. ಉಡುಪಿಯ ಕೋಟದಲ್ಲಿ 29, ಕಾರ್ಕಳದಲ್ಲಿ 25 ಸೆಂ.ಮೀ ಮಳೆ ಸುರಿದಿದೆ. ಉಡುಪಿ ಹಾಗೂ ಮಂಕಿ, ಪಟಂಬೂರಲ್ಲಿ ತಲಾ 23 ಸೆಂ.ಮೀ, ಮಂಗಳೂರಲ್ಲಿ 21 ಸೆಂ.ಮೀ ನಷ್ಟು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕಾಗಿದ್ದರೆ, ಉತ್ತರ ಒಳನಾಡಿನಲ್ಲಿ (Weather report) ಸಾಮಾನ್ಯವಾಗಿತ್ತು.
ಮುಂದಿನ 24 ಗಂಟೆಯಲ್ಲಿ (ಜು.7ರಂದು) ರಾಜ್ಯದಲ್ಲಿ ವರುಣಾರ್ಭಟ (Rain News) ಜೋರಾಗಿ ಇರಲಿದೆ. ಬಿರುಗಾಳಿ ಸಹಿತ ಗುಡುಗು, ಮಿಂಚಿನ ಭಾರಿ ಮಳೆಯಾಗುವ ಎಚ್ಚರಿಕೆಯನ್ನು (Rain alert) ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಂದೆರಡು ಕಡೆಗಳಲ್ಲಿ ಇದು ದುಪ್ಪಟ್ಟಾಗಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಜತೆಗೆ ಚಿತ್ರದುರ್ಗ, ದಾವಣಗೆರೆಯಲ್ಲಿ ಮಳೆಯಾರ್ಭಟ ಜೋರಾಗಿ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಹಾವೇರಿಯಲ್ಲಿ ಮಾತ್ರ ಭಾರಿ ಮಳೆಯಾಗಲಿದೆ.
ರಾಜ್ಯಾದ್ಯಂತ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40-55 ಕಿ.ಮೀ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಎಕ ನೀಡಲಾಗಿದೆ. ಕರಾವಳಿ ಕರ್ನಾಟಕದಲ್ಲಿ 65 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದೆ.
ರಾಜಧಾನಿಯಲ್ಲಿ ತುಂತುರ ಮಳೆಯ ನರ್ತನ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಒಂದೆರಡು ಬಾರಿ ಜೋರು ಮಳೆಯಾಗಲಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ಉಷ್ಣಾಂಶ 27 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Rain News : ಮಳೆ ಅವಾಂತರ; ಕುಸಿದು ಬಿದ್ದ ಸೇತುವೆಯಲ್ಲೇ ರೋಗಿಯ ಹೊತ್ತು ಸಾಗಿದ ಗ್ರಾಮಸ್ಥರು
ಈ ಜಿಲ್ಲೆಯ ಶಾಲೆಗಳಿಗೆ ರಜೆ
ಚಿಕ್ಕಮಗಳೂರು ತಾಲೂಕಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹೀಗಾಗಿ ಆಯ್ದ ಶಾಲಾ- ಕಾಲೇಜುಗಳಿಗೆ ಬಿಇಒ ರಜೆ ಘೋಷಿಸಲಾಗಿದೆ. ಜು.7ರಂದು ವಸ್ತಾರೆ, ಖಾಂಡ್ಯ ಆಲ್ದೂರು ,ಆವತಿ ಹೋಬಳಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಒಂದು ದಿನದ ಮಳೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿ ವೆಂಕಟರಾಜು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ