ಬೆಂಗಳೂರು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯನ್ನು (Weather Report) ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45-55 ಕಿ.ಮೀ.ವರೆಗೂ ತಲುಪುವ ಸಾಧ್ಯತೆ ಇದೆ. ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಮೋಜು ಮಸ್ತಿಗೆ ಕಡಲತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ | Rain News | ಧಾರಾಕಾರ ಮಳೆಗೆ ಚಿಕ್ಕಮಗಳೂರಿನ ಹೆದ್ದಾರಿಯೇ ಕೊಚ್ಚಿ ಹೋಯ್ತು!