Site icon Vistara News

Weather Report : ನಾಳೆಯಿಂದ ಈ 16 ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Woman with umbrella enjoying the rain

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾದರೆ ಒಳನಾಡಿನಲ್ಲಿ ಹಗುರದಿಂದ ಕೂಡಿದ (Weather report) ಮಳೆಯಾಗಲಿದೆ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಲಘು ಮಳೆಯಾಗುವ ಸಾಧ್ಯತೆ ಇದೆ. ಇತ್ತ ಉತ್ತರ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಿರುಗಾಳಿ ಮುನ್ನೆಚ್ಚರಿಕೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ. ಬಿರುಗಾಳಿ ಹಿನ್ನೆಲೆ ಜನರು ಮರದಡಿ ನಿಲ್ಲುವುದು, ಆಶ್ರಯ ಪಡೆಯದಂತೆ ಸೂಚಿಸಲಾಗಿದೆ

ಎಲ್ಲೆಲ್ಲಿ ಮಳೆಯ ಸಿಂಚನ?

ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಕ್ಯಾಸಲ್ ರಾಕ್‌ನಲ್ಲಿ 4 ಸೆಂ.ಮೀ ಮತ್ತು ಕದ್ರಾದಕಲ್ಲಿ 3 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಶಿರಾಲಿ, ಲೋಂಡಾದಲ್ಲಿ ತಲಾ 2 ಸೆಂ.ಮೀ ಹಾಗೂ ಮಂಚಿಕೆರೆ, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಉಡುಪಿ, ಕಾರ್ಕಳ , ಮುನಿರಾಬಾದ್, ಶಿಡ್ಲಘಟ್ಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಸುರಿದ ಧಾರಾಕಾರ ಮಳೆ

ಮಂಗಳವಾರ ಚಿಕ್ಕಬಳ್ಳಾಪುರದಲ್ಲಿ ತಂಪೆರೆದ ವರುಣ

ಮಂಗಳವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯ ಸಿಂಚನವಾಗಿದೆ. ಮಳೆಗಾಗಿ ಎದುರು ನೋಡುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮುಂಗಾರು ವಿಳಂಬದಿಂದ ರೈತರು ಕಂಗೆಟ್ಟಿದ್ದರು. ಸದ್ಯ ಮಳೆಯಿಂದಾಗಿ ರಾಗಿ, ಭತ್ತ ಬಿತ್ತನೆಗಾಗಿ ಸಜ್ಜಾಗುತ್ತಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version