ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ.
ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸೂರ್ಯ ತಾಪಮಾನ ಕಡಿಮೆ ಇದ್ದರೂ ವಾತಾವರಣದಲ್ಲಿ ಕೊಂಚ ಧಗೆ ಇರಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Monsoon Celebrity Tips: ಮಾನ್ಸೂನ್ನಲ್ಲಿ ಲೇಯರ್ ಲುಕ್ಗೆ ಸೈ ಎನ್ನುವ ನಟಿ ಭೂಮಿಕಾ
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯ ಕೆಲವು ಕಡೆ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಯಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕೊಪ್ಪಳ, ವಿಜಯಪುರಲ್ಲಿ ಜಿಟಿ ಜಿಟಿ ಮಳೆಯಾಗಲಿದೆ. ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ಯಾವುದೇ ಮಳೆ ಸೂಚನೆ ಇಲ್ಲ, ಒಣಹಣೆ ಇರಲಿದೆ.
ದಕ್ಷಿಣ ಒಳನಾಡಿ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನ ಕೆಲವು ಕಡೆಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಬೆಳಗಾವಿ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರದಲ್ಲಿ ಒಣಹವೆ ಇರಲಿದೆ.
ಗುಡುಗು ಮುನ್ನೆಚ್ಚರಿಕೆ
ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ