ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (Southwest monsoon) ಕರಾವಳಿಯಲ್ಲಿ ಸಾಮಾನ್ಯವಾಗಿದ್ದರೆ, ಒಳನಾಡಿನಲ್ಲಿ (weather report) ದುರ್ಬಲಗೊಂಡಿದೆ. ರಾಜ್ಯದಲ್ಲಿ ಇಂದು, ನಾಳೆ (ಜು.30, 31) ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಒಳನಾಡಿನಲ್ಲಿ ಜಿಟಿಜಿಟಿ ಮಳೆಯಾಗಲಿದೆ.
ಮಲೆನಾಡಿನ ಶಿವಮೊಗ್ಗದಲ್ಲಿ ಚದುರಿದ ಮಳೆಯಾದರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ದಕ್ಷಿಣ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ಇದನ್ನೂ ಓದಿ: Tiger Census: ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಮತ್ತೆ 2ನೇ ಸ್ಥಾನ, ರಾಜ್ಯದಲ್ಲಿರುವುದು ಇಷ್ಟು ಟೈಗರ್
ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿಯಲ್ಲಿ ತುಂತುರ ಮಳೆಯಾದರೆ, ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಜಿಟಿ ಜಿಟಿ ಮಳೆಯಾಗಲಿದೆ. ಬೆಂಗಳೂರಲ್ಲಿ ಬೆಳಗ್ಗೆ ಬಿಸಿಲು ಇದ್ದರೆ ಮಧ್ಯಾಹ್ನದ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಸಲ ಉದುರು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 29 ಡಿ.ಸೆ – 23 ಡಿ.ಸೆ
ಗದಗ: 28 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 27 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 30 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 29 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ