Site icon Vistara News

Weather report : ರಾಜ್ಯದಲ್ಲಿ ಮುಂದುವರಿಯಲಿದೆ ವರುರ್ಣಾಭಟ

girl with raindrops

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಗಾಳಿಯ ವೇಗವು ಹೆಚ್ಚಾಗಿರಲಿದ್ದು, ಈ ವೇಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರದಲ್ಲಿ ಜೋರಾಗಿ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ 48 ಗಂಟೆಯಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದೆ.

ಬಿರುಗಾಳಿ ಸಹಿತ ಮಳೆ

ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಲ್ಲಿ ಸಂಜೆ ತುಂತುರು ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಒಂದೆರಡು ಸಲ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ಮಂಗಳೂರು: 30 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 20 ಡಿ.ಸೆ
ಹೊನ್ನಾವರ: 31 ಡಿ.ಸೆ- 25 ಡಿ.ಸೆ
ಕಲಬುರಗಿ: 30 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 25 ಡಿ.ಸೆ

ಸೆಪ್ಟೆಂಬರ್‌ 8ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0421.4328936267
ಆಲಮಟ್ಟಿ ಜಲಾಶಯ
(Almatti Dam)
519.6118.053586215
ಮಲಪ್ರಭಾ ಜಲಾಶಯ (Malaprabha Dam)633.8021.610760
ಘಟಪ್ರಭಾ ಜಲಾಶಯ
(Ghataprabha Dam)
662.9141.56598176
ತುಂಗಾಭದ್ರಾ ಜಲಾಶಯ (Tungabhadra Dam)497.7172.0812669218
ಭದ್ರಾ ಜಲಾಶಯ (Bhadra Dam)657.7345.305243163
ಕಬಿನಿ ಜಲಾಶಯ (Kabini Dam)696.1313.6220071100
ಹಾರಂಗಿ
(Harangi Dam)
871.387.291779411
ಲಿಂಗನಮಕ್ಕಿ (Linganamakki Dam) 554.4467.7216963788
ಹೇಮಾವತಿ
(Hemavathi Dam)
890.5821.746496030

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version