Site icon Vistara News

Weather Report : ಕರಾವಳಿಯಲ್ಲಿ ನಾಳೆ ರಣಮಳೆ; ಮಲೆನಾಡು, ಒಳನಾಡಲ್ಲಿ ಧಾರಾಕಾರ

young woman in rain

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಕರಾವಳಿಯಲ್ಲಿ ಮಳೆ ಅಬ್ಬರ ಇದ್ದರೆ, ಮಲೆನಾಡು ಹಾಗೂ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ.

ಕಳೆದೊಂದು ವಾರದಿಂದ ಕರಾವಳಿಯಲ್ಲಿ ವರುಣ ಅಬ್ಬರಿಸುತ್ತಿದ್ದು, ಜು.24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ನದಿಪಾತ್ರದ ಜನರು, ತಗ್ಗು ಪ್ರದೇಶದಲ್ಲಿ ಇರುವವರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು, ಗುಡುಗಿನ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಇತ್ತ ಕರ್ನಾಟಕ ಕರಾವಳಿಯಲ್ಲೂ ಬಿರುಗಾಳಿಯು ಗಂಟೆಗೆ 55 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಬೆಂಗಳೂರಲ್ಲೂ ಮಳೆ ಆರ್ಭಟ

ಬೆಂಗಳೂರು ನಗರ ಪ್ರದೇಶದಲ್ಲಿ ಸಾಮಾನ್ಯವಾಗಿ ಬೆಳಗ್ಗೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನ ಹಾಗೂ ಸಂಜೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮ ಬಿರುಗಾಳಿಯು ಬೀಸಲಿದ್ದು, ಮರದಡಿ ನಿಲ್ಲದಂತೆ ಸೂಚಿಸಲಾಗಿದೆ.

ಈ ಜಿಲ್ಲೆಗಳಿಗೆ ಅಲರ್ಟ್‌

*ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
*ಆರೆಂಜ್ ಅಲರ್ಟ್: ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
*ಯೆಲ್ಲೋ ಅಲರ್ಟ್: ಬೆಳಗಾವಿ, ಕಲಬುರಗಿ, ಹಾವೇರಿ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.‌

ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ 204 mm ಗೂ ಹೆಚ್ಚು ಮಳೆಯಾಗುವ ಮುನ್ಸೂಚನೆ ಇರಲಿದೆ. ಆರೆಂಜ್ ಅಲರ್ಟ್‌ನಲ್ಲಿ 115 mm ರಿಂದ 204 mm ಮಳೆಯ ಆಗಲಿದೆ. ಯೆಲ್ಲೋ ಅಲರ್ಟ್ ಎಂದರೆ 64.5 mm ನಿಂದ 115.5 mm ಮಳೆಯ ಮುನ್ಸೂಚನೆ ಆಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version