ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Southwest Monsoon) ಕಣ್ಣಾಮುಚ್ಚಾಲೆ ಆಡುತ್ತಿದೆ. ಜೂನ್ ಕಳೆದು ಜುಲೈ ತಿಂಗಳು ಬಂದರೂ ಮುಂಗಾರು ಮಾತ್ರ ಕೆಲವು ಕಡೆ ಬಲವಾಗಿದ್ದರೆ, ಒಳನಾಡಿನ ಕಡೆ ದುರ್ಬಲವಾಗಿದೆ. ಕರಾವಳಿಯಲ್ಲಿ ಮಳೆಯಾರ್ಭಟ (Rain News) ಇದ್ದರೆ ಒಳನಾಡಿನಲ್ಲಿ (Weather report) ಸಾಧಾರಣವಾಗಿದೆ.
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಧಾರವಾಡ, ಶಿವಮೊಗ್ಗದ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ (Rain New) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಈ ಸಮಯದಲ್ಲಿ ಗಾಳಿಯ ವೇಗವು ಗಂಟೆಗೆ 40ಕಿ.ಮೀ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಜುಲೈ 5ರವರೆಗೆ ಬಹುತೇಕ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದಿನಿಂದ ( ಜು.1-5) ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಜು.1-5ರವರೆಗೆ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕೊಪ್ಪಳ, ರಾಯಚೂರಿನಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಒಣಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಮೈಸೂರು ಹಾಗೂ ಮಂಡ್ಯ, ರಾಮನಗರ, ಚಾಮರಾಜನಗರ, ಬಳ್ಳಾರಿ ಸೇರಿದಂತೆ ಚಿತ್ರದುರ್ಗ, ದಾವಣಗೆರೆ ಹಾಗೂ ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಜು.1-2 ರಂದು ಕೆಲವು ಕಡೆಗಳಲ್ಲಿ 3-4 ಹಲವು ಕಡೆ 5ರಂದು ಬಹುತೇಕ ಎಲ್ಲ ಭಾಗಗಳಲ್ಲೂ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಇದನ್ನೂ ಓದಿ: Monsoon Fashion: ಮಾನ್ಸೂನ್ ಸೀರೆ ಸ್ಟೈಲಿಂಗ್‌ಗೆ ಸಾಥ್‌ನೀಡಲು ಬಂತು ಕಾಲರ್ ನೆಕ್ ಬ್ಲೌಸ್
ದಕ್ಷಿಣ ಒಳನಾಡಿನಲ್ಲಿ ಗಾಳಿಯ ವೇಗವು 40-50 ಕಿ.ಮೀ ಇದ್ದರೆ ಉತ್ತರ ಒಳನಾಡಿನಲ್ಲಿ ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 33 ಡಿ.ಸೆ – 24 ಡಿ.ಸೆ
ಗದಗ: 30 ಡಿ.ಸೆ – 23ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 29 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 25 ಡಿ.ಸೆ
ಹೊನ್ನಾವರ: 30 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ