ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು (Southwest monsoon) ಮಂಗಳವಾರದಂದು ಸಾಮಾನ್ಯವಾಗಿದೆ. ಕರಾವಳಿ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದ್ದರೆ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ (Weather report) ಸಾಧ್ಯತೆಯಿದೆ. ದಕ್ಷಿನ ಒಳನಾಡಿನಲ್ಲಿ ಸಣ್ಣ ಮಳೆಯಾಗಲಿದೆ.
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿಯಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು, ತುಮಕೂರಲ್ಲಿ ಭರ್ಜರಿ ಮಳೆ
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿ ರಾಮನಗರ, ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: ವಿಶ್ಲೇಷಣೆ: ಜನಸಮೂಹದ ಆಯ್ಕೆ ಸ್ವಾತಂತ್ರ್ಯ ಕಸಿದ ಬೆಲೆಯೇರಿಕೆ
ಸೋಮವಾರ ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಕಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಸುಳ್ಯ, ಶಿರಾಲಿ, ಗೇರುಸೊಪ್ಪಾ, ಕದ್ರಾ, ಮಂಚಿಕೆರೆ, ಕ್ಯಾಸಲ್ ರಾಕ್‌ನಲ್ಲಿ ತಲಾ 2 ಸೆಂ.ಮೀ ಹಾಗೂ ಬೆಳ್ತಂಗಡಿ, ಧರ್ಮಸ್ಥಳ , ಕಾರ್ಕಳ, ಸಿದ್ದಾಪುರ, ಜೋಯಿಡಾ, ಭಾಗಮಂಡಲ, ಲಿಂಗನಮಕ್ಕಿ, ಜಿಕೆವಿಕೆ, ಗುಬ್ಬಿ ತಲಾ 1 ಸೆಂ.ಮೀ ಮಳೆಯಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 22 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 32 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 20 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ