ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (rain news) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (weather report) ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಂದು ಸ್ಥಳದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಇರುವ ಸಾಧ್ಯತೆ ಇದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ. ಚಿಕ್ಕಬಳ್ಳಾಪುರ, ಮಂಡ್ಯ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರಿನಲ್ಲಿ ಒಣಹವೆ ಇರಲಿದೆ.
ಇನ್ನು ನೈರುತ್ಯ ಮುಂಗಾರು ಬುಧವಾರದಂದು (ಆ.2) ರಾಜ್ಯಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕ್ಯಾಸಲ್ ರಾಕ್ (ಉತ್ತರ ಕನ್ನಡ ಜಿಲ್ಲೆ) 5, ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ) 3, ಲೋಂಡಾ (ಬೆಳಗಾವಿ ಜಿಲ್ಲೆ) 2, ಕೊಲ್ಲೂರು (ಉಡುಪಿ ಜಿಲ್ಲೆ), ಕದ್ರಾ, ಜೋಯಿಡಾ, ಮುಂಡಗೋಡು (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಗುಂಜಿ (ಬೆಳಗಾವಿ ಜಿಲ್ಲೆ), ಕಮ್ಮರಡಿ (ಚಿಕ್ಕಮಗಳೂರು ಜಿಲ್ಲೆ), ತಾಳಗುಪ್ಪ (ಶಿವಮೊಗ್ಗ ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 30 ಡಿ.ಸೆ – 24 ಡಿ.ಸೆ
ಗದಗ: 28 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 27 ಡಿ.ಸೆ – 21 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 29 ಡಿ.ಸೆ – 25 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 30 ಡಿ.ಸೆ – 19 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ