Site icon Vistara News

Weather Report : ರಾಜ್ಯದಲ್ಲಿ ಇನ್ನೆರಡು ದಿನ ತಲೆ ಬಿಸಿ; ಏರಲಿದೆ ತಾಪಮಾನ, ಅಲ್ಲಲ್ಲಿ ಇರಲಿದೆ ಮಳೆ ಅಬ್ಬರ

weather report

weather report

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka News) ತಗ್ಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಜತೆಗೆ ರಾಜ್ಯಾದ್ಯಂತ ತಾಪಮಾನ ಏರಿಕೆಯೂ (Temperature) ಆಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಧಾರಾಕಾರ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶವು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಜತೆಗೆ ವಾತಾವರಣದಲ್ಲಿ ಬಿಸಿ ಗಾಳಿಯಿಂದ (HeatWaves) ಕೂಡಿರಲಿದೆ.

ಬೆಂಗಳೂರಿಗೆ ಇಲ್ಲ ಮಳೆ ಎಚ್ಚರಿಕೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಬಿಸಿಲ ಧಗೆ ಕೊಂಚ ಹೆಚ್ಚಾಗಿ ಇರಲಿದೆ. ಯಾವುದೇ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿಲ್ಲ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Accident News: ವಂದೇಭಾರತ್ ರೈಲಿಗೆ ಸಿಲುಕಿ ವೃದ್ಧೆ ಮೃತ್ಯು; ಗೂಡ್ಸ್‌ ರೈಲಿಗೆ 15 ಜಾನುವಾರಗಳು ಬಲಿ

ರಾಜ್ಯದಲ್ಲಿ ಭಾನುವಾರದಂದು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಒಳನಾಡಿನ ಭಾಗಗಲ್ಲಿ ಒಣ ಹವೆ ಇತ್ತು. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.

Exit mobile version