Site icon Vistara News

Weather Report: ಕರಾವಳಿ, ಉತ್ತರ ಒಳನಾಡಿನಲ್ಲಿ ತಾಪಮಾನ ಏರಿಕೆ; ಚಿಕ್ಕಮಗಳೂರು, ಹಾಸನ ಸೇರಿ 5 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

More Rain Next Week, Farmers Asked to Postpone Harvest

More Rain Next Week, Farmers Asked to Postpone Harvest

ಬೆಂಗಳೂರು: ಮುಂದಿನ 28 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ಏ.11ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಸೇರಿ ದಾವಣಗೆರೆಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.

ಉಳಿದಂತೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದ್ದು, ಇತರೆ ದಿನಕ್ಕಿಂತ ಮಂಗಳವಾರ ತಾಪಮಾನದಲ್ಲಿ ಏರಿಕೆ (Temperature Warning) ಆಗಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ: Fire Accident: ಕೊಪ್ಪಳದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ; ಉಡುಪಿಯಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ವೆಹಿಕಲ್‌

ಬೆಂಗಳೂರು ನಗರದಲ್ಲಿ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಬೆಳಗಿನ ಜಾವ ಮಂಜು ಮುಸುಕಿನ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇನ್ನು ಭಾನುವಾರ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.4 ಡಿಗ್ರಿ ಸೆಲ್ಸಿಯಸ್‌ ವರದಿ ಆಗಿದೆ.

Exit mobile version