ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ (Karnataka News) ತಗ್ಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಜತೆಗೆ ರಾಜ್ಯಾದ್ಯಂತ ತಾಪಮಾನ ಏರಿಕೆ (Temperature) ಆಗಲಿದೆ.
ಮೇ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ (Karnataka Rain) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು ಹಾಗೂ ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ಶಿವಮೊಗ್ಗದಲ್ಲಿ ವ್ಯಾಪಕ (Weather Report) ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ, ಕೊಪ್ಪಳದಲ್ಲಿ ಗುಡುಗು ಸಹಿತ ವರುಣ ಅಬ್ಬರಿಸಲಿದ್ದರೆ, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ.
ಮಳೆಯ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮಳೆ ಬಂತೆಂದು ಕೂಲ್ ಕೂಲ್ ವಾತಾವರಣ ಇರುವುದಿಲ್ಲ ಬದಲಿಗೆ ಮತ್ತಷ್ಟು ಧಗೆ ಹೆಚ್ಚಾಗಲಿದೆ.
ಇದನ್ನೂ ಓದಿ: Karnataka Election Result: ‘ನಿಮ್ಮವ, ನಿಮ್ಮ ಪ್ರೀತಿಯ ಮನೆ ಮಗ’; ಸೋತ ಬಳಿಕ ಪತ್ರ ಬರೆದ ಸಿಟಿ ರವಿ, ಸುಧಾಕರ್
ರಾಜಧಾನಿ ಬೆಂಗಳೂರು ನಗರದಲ್ಲಿ ಭಾನುವಾರ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.