ಬೆಂಗಳೂರು: ಮುಂದಿನ 24 ಗಂಟೆಯಲ್ಲಿ (Weather Report) ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ.
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರಿನಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಯಾದ ಬೀದರ್, ಬಾಗಲಕೋಟೆ, ಕಲಬುರಗಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳ ಪ್ರತ್ಯೇಕ ಕಡೆ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: lalbagh flower show 2023 : ಲಾಲ್‌ಬಾಗ್ ಕಾರ್ಮಿಕನಿಗೆ ತಪ್ಪಾಯ್ತಣ್ಣಾ ಎಂದ ರಚಿತಾ ರಾಮ್
ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ
ರಾಜ್ಯದಲ್ಲಿ ಸೋಮವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ರಾಜ್ಯದ ಒಂದೆರಡು ಕಡೆಗಳಲ್ಲಿ ಮಾತ್ರ ಮಳೆ ಬಿದ್ದ ವರದಿ ಆಗಿದೆ. ಕೊಪ್ಪಳದಲ್ಲಿ 3 ಸೆಂ.ಮೀ ಹಾಗೂ ಮುನಿರಾಬಾದ, ಹೊಸಪೇಟೆಯಲ್ಲಿ ತಲಾ 2, ರಾಯಚೂರು, ಸಿಂಧನೂರು ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ