Site icon Vistara News

Weather report: ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಮಳೆ; ಉತ್ತರ, ದಕ್ಷಿಣ ಒಳನಾಡಲ್ಲಿ ವರುಣಾರ್ಭಟ

Rain in town hall

Rain in town hall

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Weather Report) ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆ ಅಬ್ಬರ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಸೇರಿ ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯದಲ್ಲೂ ವ್ಯಾಪಕ ಮಳೆಯಾಗಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಕನಿಷ್ಠ, ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ:Karnataka Election 2023: ಮತದಾನಕ್ಕೆ ಮದುಮಗನಂತೆ ಬಂದ ಡಾಲಿ; ಹೇಗಿತ್ತು ನೋಡಿ ರಿಷಬ್‌ ಶೆಟ್ಟಿ ಶೈಲಿ

ಎಲ್ಲೆಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜತೆಗೆ ರಾಜ್ಯಾದ್ಯಂತ ಗುಡುಗು ಮಿಂಚಿನ ಕೂಡಿದ ಮಳೆಯಾಗಲಿದೆ. ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ರಾಜ್ಯದಲ್ಲಿ ಮಂಗಳವಾರ ಕಲಬುರುಗಿಯಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Exit mobile version