ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Southwest Monsoon) ಚುರುಕಾಗಿದ್ದು, ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆ, ಕರಾವಳಿ ಮತ್ತು ಉತ್ತರ ಒಳನಾಡಿನ (Rain News) ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (weather report) ತಿಳಿಸಿದೆ.
ಬೆಂಗಳೂರಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಆಗಾಗ ಬಿಸಿಲು ಬರಲಿದೆಯಾದರೂ ಸಂಜೆ ವೇಳೆಗೆ ಭರ್ಜರಿಯಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದರೆ, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Gold Rate Today: ಬಂಗಾರದ ದರದಲ್ಲಿ ಮತ್ತೆ ಏರಿಕೆ, 22 ಕ್ಯಾರಟ್ ಬೆಲೆ ಇಷ್ಟಿದೆ ನೋಡಿ
ಸೆಪ್ಟೆಂಬರ್ 2ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯಗಳಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 23.08 | 1635 | 7230 |
ಆಲಮಟ್ಟಿ ಜಲಾಶಯ (Almatti Dam) | 519.6 | 121.96 | 5767 | 1705 |
ಮಲಪ್ರಭಾ ಜಲಾಶಯ (Malaprabha Dam) | 633.80 | 22.32 | 0 | 2194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 41.19 | 2531 | 1134 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 77.01 | 261 | 9475 |
ಭದ್ರಾ ಜಲಾಶಯ (Bhadra Dam) | 657.73 | 46.72 | 606 | 3222 |
ಕಬಿನಿ ಜಲಾಶಯ (Kabini Dam) | 696.13 | 13.63 | 1852 | 2000 |
ಹಾರಂಗಿ (Harangi Dam) | 871.38 | 7.46 | 522 | 1700 |
ಲಿಂಗನಮಕ್ಕಿ (Linganamakki Dam) | 554.44 | 69.48 | 1226 | 7561 |
ಹೇಮಾವತಿ (Hemavathi Dam) | 890.58 | 24.41 | 861 | 5780 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ