Site icon Vistara News

Weather Report: ಮುಂದಿನ 24 ಗಂಟೆಯಲ್ಲಿ ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ (Karnataka Rain) ಮುಂದುವರಿದಿದ್ದು, ಏ.14ರಂದು ಗುಡುಗು ಸಹಿತ ಮಳೆಯಾಗುವ (Weather report) ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ.

ಬೆಂಗಳೂರು ನಗರದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಗರಿಷ್ಠ ಉಷ್ಣಾಂಶ 35 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬುಧವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 40.9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಇದನ್ನೂ ಓದಿ:Bengaluru Karaga 2023: ಕರಗ ಹೊತ್ತ ಪೂಜಾರಿ ಮೇಲೆ ಕೆಮಿಕಲ್‌ ದಾಳಿ ಮಾಡಿದವನ ಸೆರೆ

ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಶನಿವಾರದಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗಿನ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ.

Exit mobile version