Site icon Vistara News

Weather Report: ಪ್ರಮಾಣ ವಚನಕ್ಕೆ ವರುಣನ ಕಾಟ; ಮೇ 20-21ರಂದು ಗುಡುಗು, ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ

Rain

Rain

ಬೆಂಗಳೂರು: ರಾಜ್ಯಾದ್ಯಂತ ಮೇ 20-21ರಂದು ಎರಡು ದಿನ ಗುಡುಗು ಸಹಿತ ಮಳೆಯಾಗುವ (IMD Rainfall Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಚಾಮರಾಜ ನಗರ, ಕೊಡಗು, ರಾಮನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (karnataka Rain) ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ/ ರಾತ್ರಿಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ

ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ಒಳನಾಡಿನ ಹಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಪಟ್ಟಾಭಿಷೇಕಕ್ಕೆ ವರುಣ ಅಡ್ಡಗಾಲು?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ (Karnataka CM) ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ (Deputy Chief Minister) ಡಿ.ಕೆ. ಶಿವಕುಮಾರ್‌ ಅವರ ಪದಗ್ರಹಣ ಕಾರ್ಯಕ್ರಮದ ಶನಿವಾರ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava stadium) ನಡೆಯಲಿದೆ. ಆದರೆ, ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: KCET 2023 : ಸಿಇಟಿಯಂದೇ ಪ್ರಮಾಣ; ಇದೇ ದಿನ ಬೇಕಿತ್ತಾ ಎಂದು ಪ್ರಶ್ನಿಸಿದ ಸಂತೋಷ್‌

ಗುರುವಾರದಂದು (ಮೇ 18) ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಕೊಡಗಿನ ಸುಂಟಿಕೊಪ್ಪದಲ್ಲಿ 4 ಸೆಂ.ಮೀ, ನಾಪೋಕ್ಲು 3 ಸೆಂ.ಮೀ ಮಳೆಯಾಗಿದೆ. ಜತೆಗೆ ಹಾರಂಗಿ, ಸೋಮವಾರಪೇಟೆ, ಕನಕಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version