ಬೆಂಗಳೂರು: ನೈರುತ್ಯ ಮುಂಗಾರು (Southwest monsoon) ದುರ್ಬಲಗೊಂಡಿದ್ದರೂ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಮುನ್ಸೂಚನೆ ಇದೆ. ಕರಾವಳಿ ಭಾಗವಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ (weather report) ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಯಾದ ಕೊಪ್ಪಳ, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ.
ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಬೆಂಗಳೂರು ನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ.
ಫ್ಲವರ್ ಶೋಗೆ ಮಳೆ ಅಡ್ಡಿ?
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಫ್ಲವರ್ ಶೋಗೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Mother and son death : ಪುಟ್ಟ ಮಗನನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ; ಅವಳಿಗಿತ್ತು ಅದೊಂದು ನೋವು
ರಾಜ್ಯದಲ್ಲಿ ಶನಿವಾರ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ವಿಜಯಪುರದ ಬಸವನ ಬಾಗೇವಾಡಿಯಲ್ಲಿ 5 ಹಾಗೂ ಕೊಡಗಿನ ಪೊನ್ನಂಪೇಟೆ ಪಿಡಬ್ಲೂಡಿ 4 ಸೆಂ.ಮೀ ಮಳೆಯಾಗಿದೆ. ರಾಯಚೂರಿನ ಗಬ್ಬುರು 3, ಮೈಸೂರಿನ ಸುತ್ತೂರು ಎ.ಡಬ್ಲೂ.ಎಸ್, ಚಾಮರಾಜನಗರದ ಹರದನಹಳ್ಳಿ ಕೆ.ವಿ.ಕೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಕ್ಯಾಸಲ್ ರಾಕ್, ರಾಯಚೂರಿನ ದೇವದುರ್ಗ, ಯಾದಗಿರಿಯ ಕಕ್ಕೆರಿ, ವಿಜಯಪುರದಲ್ಲಿ ತಲಾ 1ಸೆಂ.ಮೀ ಮಳೆಯಾಗಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 33 ಡಿ.ಸೆ – 23 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಬೆಳಗಾವಿ: 28 ಡಿ.ಸೆ – 20 ಡಿ.ಸೆ
ಕಾರವಾರ: 32 ಡಿ.ಸೆ – 25 ಡಿ.ಸೆ
ಮಂಗಳೂರು: 30 ಡಿ.ಸೆ – 25 ಡಿ.ಸೆ
ಹೊನ್ನಾವರ: 30 ಡಿ.ಸೆ- 24 ಡಿ.ಸೆ
ಬೆಂಗಳೂರು ನಗರ: 22 ಡಿ.ಸೆ – 31 ಡಿ.ಸೆ
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ