ಬೆಂಗಳೂರು: ದಕ್ಷಿಣ ಒಳನಾಡಿನ (south Interior Karnataka) ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಮುಂದಿನ 48 ಗಂಟೆಯಲ್ಲಿ 9 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Karnataka rain) ಸಾಧ್ಯತೆ ಇದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ಮಂಡ್ಯ, ಮೈಸೂರು, ಹಾಸನ ಭಾಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆಯನ್ನು ನೀಡಿದೆ.
ಇನ್ನು ಸೋಮವಾರದಂದು ಚಾಮರಾಜನಗರದ ಕೊಳ್ಳೇಗಾಲದಲ್ಲಿ 9 ಸೆಂ.ಮೀ ಪ್ರಮಾಣದಲ್ಲಿ ಮಳೆಯಾಗಿರುವ ವರದಿಯಾಗಿದೆ. ಬೆಂಗಳೂರು ನಗರ ಸೇರಿದಂತೆ ಟಿ.ನರಸೀಪುರದಲ್ಲಿ 2 ಸೆಂ.ಮೀ ಹಾಗೂ ಬಂಡೀಪುರದಲ್ಲಿ 1 ಸೆಂ.ಮೀ ಮಳೆಯಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಇದನ್ನೂ ಓದಿ: Train accident: ಹಳಿ ಮೇಲೆ ಬಿದ್ದ ಬೃಹತ್ ಮರ; ರೈಲು ಅವಘಡ ತಪ್ಪಿಸಿದ 70ರ ಹರೆಯದ ಭಾಗ್ಯವಂತೆ!
ಬೆಂಗಳೂರಲ್ಲಿ ಇನ್ನೆರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆಯ ಹೊತ್ತಿಗೆ ಜಿಟಿ ಜಿಟಿ ಮಳೆಯೊಂದಿಗೆ ಗುಡುಗು ಇರಲಿದೆ. ಗರಿಷ್ಠ ಉಷ್ಣಾಂಶ 32 ಹಾಗೂ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.