ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು, ಏ.12ರಂದು ದಕ್ಷಿಣ ಒಳನಾಡಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain Alert) ಸಾಧ್ಯತೆ ಇದೆ. ಮುಂದಿನ 28 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.
ಉಳಿದಂತೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಇತರೆ ದಿನಕ್ಕಿಂತ ತಾಪಮಾನದಲ್ಲಿ ಏರಿಕೆ (Temperature Warning) ಆಗಲಿದೆ. ಗರಿಷ್ಠ ಉಷ್ಣಾಂಶವು ಕರಾವಳಿ ಭಾಗದಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಯಾವುದೇ ಮಳೆ ಮುನ್ಸೂಚನೆಯಿಲ್ಲ. ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.