Site icon Vistara News

Weather Report: ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

#image_title

ಬೆಂಗಳೂರು: ಕಳೆದೆರಡು ದಿನಗಳಿಂದ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರಿಸಿದ್ದು, ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ (Karnataka rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Weather Report) ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ ಹಾಗೂ ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಸೇರಿ ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಾಗೂ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಗುಡುಗು ಮುನ್ನೆಚ್ಚರಿಕೆ:

ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ ಮತ್ತು ಗದಗ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಗುಡುಗು ಮಿಂಚಿನ ಮಳೆಯಾಗಲಿದೆ.

ಗರಿಷ್ಠ ಉಷ್ಣಾಂಶದ ಎಚ್ಚರಿಕೆ :

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರಿಸಿದರೆ ಇತ್ತ ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೂ ಗರಿಷ್ಠ ಉಷ್ಣಾಂಶ ಇರಲಿದೆ. ಹಾಗೇ ಒಳನಾಡಿನ ಒಂದೆರಡು ಕಡೆಗಳಲ್ಲಿ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಇದನ್ನೂ ಓದಿ: Karnataka Election 2023: ನಾನು ಜೈಲಿಗೆ ಹೋಗಿ ಬಂದಿದ್ದೇನೆ; ರಾಹುಲ್, ಸೋನಿಯಾ, ಡಿಕೆಶಿ ಕತೆ ಏನು?: ಜನಾರ್ದನ ರೆಡ್ಡಿ

ಮಳೆ ಪ್ರಮಾಣ:

ಶುಕ್ರವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಇತ್ತು. ಧಾರವಾಡದ ಕುಂದಗೋಳ, ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೆಳಗಾವಿಯ ಕನಬರ್ಗಿ, ಚಿಂಚೋಳಿ, ಪಾವಗಡ, ಗೌರಿಬಿದನೂರು, ಯಗಟಿ, ಭಾಗಮಂಡಲದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣ, ಗುತ್ತಲ್, ರಾಣೆಬೆನ್ನೂರು, ಬಸವನ ಬಾಗೇವಾಡಿ, ಬಂಡೀಪುರ, ಹುಣಸೂರು, ಶಿವಮೊಗ್ಗ, ಬುಕ್ಕಾಪಟ್ಟಣ, ಕುಣಿಗಲ್ ಉಚ್ಚಂಗಿದುರ್ಗದಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ.

Exit mobile version