Site icon Vistara News

Weather report: 13 ಜಿಲ್ಲೆಗಳಲ್ಲಿ ಆರ್ಭಟಿಸಲಿದ್ದಾನೆ ವರುಣ; ಇರಲಿದೆ ಗುಡುಗು, ಸಿಡಿಲು, ಬೀಸಲಿದೆ ಬಿರುಗಾಳಿ

rain news

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ (Weather report) ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain alert) ಸಾಧ್ಯತೆ ಇದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಲು ಇದ್ದರೆ, ಮೋಡ ಕವಿಯಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇನ್ನು ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಕೊಡಗು ಮತ್ತು ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಇರಲಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ, ಗುಡುಗು ಮುನ್ನೆಚ್ಚರಿಕೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಮಳೆ ನಡುವೆಯೂ ಗರಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಯಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಸಮುದ್ರ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.

ಇದನ್ನೂ ಓದಿ: Hubballi News: ಅಮ್ಮನ ಸೀರೆಯಲ್ಲಿ ನೇಣಿಗೆ ಕೊರಳೊಡ್ಡಿದ ಸಹೋದರಿಯರು

ರಾಜ್ಯದಲ್ಲಿ ಶನಿವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಇತ್ತು. ಕೊಡಗಿನ ನಾಪೋಕ್ಲು 5 ಸೆಂ.ಮೀ, ಕೊಳ್ಳೇಗಾಲ, ಸರಗೂರು, ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅರಕಲಗೂಡು, ಮೂರ್ನಾಡಲ್ಲಿ ತಲಾ 2 ಸೆಂ.ಮೀ, ಬೀದರ್, ಟಿ ನರಸೀಪುರ, ಕಳಸ, ಮೂಡಿಗೆರೆ ಕೆವಿಕೆ, ಮೈಸೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಜತೆಗೆ ಗರಿಷ್ಠ ಉಷ್ಣಾಂಶ 42.0 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version