Site icon Vistara News

Weather Report : ಕರಾವಳಿಯಲ್ಲಿ ಬಿರುಗಾಳಿ ಮಳೆ; ಮಲೆನಾಡು, ಉತ್ತರದಲ್ಲಿ ಸಾಧಾರಣ

Rain and girl

ಬೆಂಗಳೂರು: ರಾಜ್ಯದ ಹಲವು ಕಡೆ ಮಳೆ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಆದರೆ, ಬುಧವಾರ ಮತ್ತು ಗುರುವಾರ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಹೇಳಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಹಲವು ಕಡೆ ಭರ್ಜರಿ (Coastal Karnataka Rainfall) ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮಲೆನಾಡು ಜಿಲ್ಲೆಗಳಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗಿನ ಹಲವು ಕಡೆ ಅಲ್ಪ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ (South Inland) ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಸ್ಥಳಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ (North Inland) ಬೆಳಗಾವಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಯಲ್ಲಿ ಜಿಟಿಜಿಟಿ ಮಳೆಯಾಗಲಿದೆ.

ಇದನ್ನೂ ಓದಿ: Naadageethe row: ನಾಡಗೀತೆಯ ಬೆನ್ನುಹತ್ತಿದ ಹೈಕೋರ್ಟ್‌; ಕಟಕಟೆಗೆ ಬರ್ತಾರಾ ಗಾಯಕಿ ಬಿ.ಕೆ ಸುಮಿತ್ರಾ?

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ (Bangalore Rain today) ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಾಳಿ ವೇಗ ಹೆಚ್ಚು; ಮೀನುಗಾರರಿಗೆ ಎಚ್ಚರಿಕೆ

ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 65 ಕಿ.ಮೀ ಇರಲಿದೆ. ಹೀಗಾಗಿ ಮೀನುಗಾರರು ಈ ಸಮಯದಲ್ಲಿ ಸಮುದ್ರಕ್ಕೆ ಇಳಿಯದಂತೆ (Alert to fishermen) ಸೂಚಿಸಲಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version