Site icon Vistara News

Weather Report : ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಮಳೆ

Karnataka Rain alert

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚಿನ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather report) ತಿಳಿಸಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದ ಹಲವು ಕಡೆಗಳಲ್ಲಿ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಮಲೆನಾಡಿನ ಭಾಗವಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗಬಹುದು. ಉತ್ತರ ಒಳನಾಡಿನ ಬೀದರ್‌, ಬೆಳಗಾವಿ, ಧಾರವಾಡ, ಗದಗ, ರಾಯಚೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಅಲ್ಲಲ್ಲಿ ಮಳೆಯಾಗಲಿದೆ.

ಈ ಜಿಲ್ಲೆಗಳಲ್ಲಿ ಒಣಹವೆ

ಉತ್ತರ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇಲ್ಲ. ಬಾಗಲಕೋಟೆ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗರಿಯಲ್ಲಿ ಒಣಹವೆ ಇರಲಿದೆ.

ಇನ್ನು ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉತ್ತರ ಕನ್ನಡದ ಗೋಕರ್ಣ 4 ಸೆಂ.ಮೀ, ಕುಮಟಾ 3, ಮಂಕಿ 2 ಕೆ.ಮೀ ಮಳೆಯಾಗಿದೆ. ಹೊನ್ನಾವರ, ಕಾರವಾರ, ಅಂಕೋಲಾ, ಮಂಚಿಕೇರಿ, ಬೇಲಿಕೇರಿ, ಲೊಂಡಾ, ಕಲಘಟಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ – 21 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 21 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 29 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 23 ಡಿ.ಸೆ
ಬೆಳಗಾವಿ: 27 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 25 ಡಿ.ಸೆ

ಆಗಸ್ಟ್‌ 26ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೈಕೊಟ್ಟಿದ್ದು, ವಾಡಿಕೆ ಮಳೆಯಾಗಿಲ್ಲ. ಇದರಿಂದ ಕೃಷಿ ಚಟುವಟಿಕೆ ಸೇರಿದಂತೆ ಇತರೆ ಕಾರ್ಯಗಳಿಗೆ ನೀರು ಇಲ್ಲದಂತಾಗಿದೆ. ಇತ್ತ ಜಲಾಶಯಗಳಲ್ಲೂ ನೀರಿನ ಮಟ್ಟ ಕಡಿಮೆಯಾಗುತ್ತಿದ್ದು ಅನ್ನದಾತರಲ್ಲಿ ಆತಂಕ ಮೂಡಿಸಿದೆ. ಆಗಸ್ಟ್‌ 26ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0425.0432767654
ಆಲಮಟ್ಟಿ ಜಲಾಶಯ
(Almatti Dam)
519.6122.4803049
ಮಲಪ್ರಭಾ ಜಲಾಶಯ (Malaprabha Dam)633.8023.01894894
ಘಟಪ್ರಭಾ ಜಲಾಶಯ
(Ghataprabha Dam)
662.9142.117254703
ತುಂಗಾಭದ್ರಾ ಜಲಾಶಯ (Tungabhadra Dam)497.7181.10163610730
ಭದ್ರಾ ಜಲಾಶಯ (Bhadra Dam)657.7348.3012793224
ಕಬಿನಿ ಜಲಾಶಯ (Kabini Dam)696.1314.41 14114325
ಹಾರಂಗಿ
(Harangi Dam)
871.388.219881700
ಲಿಂಗನಮಕ್ಕಿ (Linganamakki Dam) 554.4472.4212557027
ಹೇಮಾವತಿ
(Hemavathi Dam)
890.5827.279944950
ಜಲಾಶಯಗಳ ನೀರಿನ ಮಟ್ಟ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version