Site icon Vistara News

Weather report : ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಗಾಳಿ-ಮಳೆ!

Girl Rain pose with sky

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿಯಲ್ಲಿ (Weather report) ಸಾಮಾನ್ಯವಾಗಿದೆ. ದಕ್ಷಿಣ ಒಳನಾಡಿನಲ್ಲಿ ದುರ್ಬಲಗೊಂಡಿದೆ. ಸೆ.7ರಂದು ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ (Rain news) ಮಳೆಯಾಗಲಿದೆ.

ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮುಂದಿನ 48 ಗಂಟೆಯಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಗುಡುಗು ಮುನ್ನೆಚ್ಚರಿಕೆ

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ. ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಹೀಗಾಗಿ ಈ ಸಮಯದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಲ್ಲಿ ಗಾಳಿ-ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆ ಒಂದೆರಡು ಸಲ ಹಗುರ ಮಳೆಯಾಗಲಿದ್ದು, ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Road accident : ನಿಲ್ದಾಣದ ಬಳಿ ನಿಂತಿದ್ದ ಮಕ್ಕಳ ಮೇಲೆಯೇ ನುಗ್ಗಿದ ಬಸ್‌; ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ – 20 ಡಿ.ಸೆ
ಮಂಗಳೂರು: 29 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 31 ಡಿ.ಸೆ – 20 ಡಿ.ಸೆ
ಹೊನ್ನಾವರ: 31 ಡಿ.ಸೆ- 25 ಡಿ.ಸೆ
ಕಲಬುರಗಿ: 33 ಡಿ.ಸೆ – 24 ಡಿ.ಸೆ
ಬೆಳಗಾವಿ: 29 ಡಿ.ಸೆ – 19 ಡಿ.ಸೆ
ಕಾರವಾರ: 33 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 7ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0421.7324326344
ಆಲಮಟ್ಟಿ ಜಲಾಶಯ
(Almatti Dam)
519.6118.5678412908
ಮಲಪ್ರಭಾ ಜಲಾಶಯ (Malaprabha Dam)633.8021.680760
ಘಟಪ್ರಭಾ ಜಲಾಶಯ
(Ghataprabha Dam)
662.9141.53445167
ತುಂಗಾಭದ್ರಾ ಜಲಾಶಯ (Tungabhadra Dam)497.7172.7611916613
ಭದ್ರಾ ಜಲಾಶಯ (Bhadra Dam)657.7345.524343316
ಕಬಿನಿ ಜಲಾಶಯ (Kabini Dam)696.1313.55788500
ಹಾರಂಗಿ
(Harangi Dam)
871.387.171291550
ಲಿಂಗನಮಕ್ಕಿ (Linganamakki Dam) 554.4467.9124154545
ಹೇಮಾವತಿ
(Hemavathi Dam)
890.5822.217005900

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version