Weather Report : ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!‌ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ - Vistara News

ಕರ್ನಾಟಕ

Weather Report : ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್!‌ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

Rain News : ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ.

VISTARANEWS.COM


on

Heavy rain
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯಾದರೆ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಭಾರೀ ಮಳೆ ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಗೆ ಅಲರ್ಟ್‌ ನೀಡಲಾಗಿದೆ. ಜತೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ವಿಜಯನಗರದಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಮತ್ತು ರಾಮನಗರ ಜಿಲ್ಲೆಗಳ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.

ಈ ಜಿಲ್ಲೆಗಳಲ್ಲಿ ಚದುರಿದ ಮಳೆ

ದಕ್ಷಿಣ ಒಳನಾಡಿನ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ರಾಯಚೂರಲ್ಲೂ ಲಘು ಮಳೆಯಾಗಲಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತಕ್ಕಮಟ್ಟಿಗೆ ಹಗುರ ಮಳೆಯಾಗಲಿದೆ. ಹಾಸನ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಇರಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು, ಬಿರುಗಾಳಿಯ ಮುನ್ನೆಚ್ಚರಿಕೆ

ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಇದನ್ನೂ ಓದಿ: Assault Case : ಆಂಟಿ ಎಂದವನಿಗೆ ಚಪ್ಪಲಿಯಿಂದ ಹೊಡೆದಳು!

ಸೆ.23ರಂದು ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಭಾರಿ ಮಳೆಯು ಕುರ್ಡಿ, ಮಧುಗಿರಿಯಲ್ಲಿ ತಲಾ 9, ಮಂಗಳೂರು ವಿಮಾನ ನಿಲ್ದಾಣ, ಸಿಂಧನೂರು, ಹುಣಸಗಿ ತಲಾ 7 ಸೆಂ.ಮೀ ಮಳೆಯಾಗಿದೆ. ಪಣಂಬೂರು, ಮೂಲ್ಕಿ, ಮಾಣಿ, ಪುತ್ತೂರು ಎಚ್‌ಎಂಎಸ್, ಜಾಲಹಳ್ಳಿ, ಕಕ್ಕೇರಿ, ಚಿಂತಾಮಣಿ ತಲಾ 6 ಸೆಂ.ಮೀ ಮಳೆಯಾಗಿದೆ.

ಕಾರ್ಕಳ, ಮಾನ್ವಿ, ಶಹಪುರ, ಗೌರಿಬಿದನೂರು ತಲಾ 5 ಸೆಂ.ಮೀ, ಧರ್ಮಸ್ಥಳ, ಉಡುಪಿ, ಕುಷ್ಟಗಿ, ಶಿಡ್ಲಘಟ್ಟ, ಭಾಗಮಂಡಲ ತಲಾ 4, ಬೆಳ್ತಂಗಡಿ, ಕೆಂಭಾವಿ, ಶೋರಾಪುರ, ನಾಲ್ವತವಾಡ, ರಾಯಚೂರು, ಬೇವೂರು, ದೇವದುರ್ಗ, ತೊಂಡೆಭಾವಿ, ಚಿಕ್ಕಬಳ್ಳಾಪುರ ರಾಯಲ್ಪಾಡು, ಹೊಸಕೋಟೆ, ಶೃಂಗೇರಿ ಎಚ್‌ಎಂಎಸ್, ಕಳಸ, ತ್ಯಾಗರ್ತಿ, ಕೋಲಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮಂಗಳೂರು, ಸುಳ್ಯ, ಕುಂದಾಪುರ, ಕೋಟ, ಕಾರವಾರ, ಗೋಕರ್ಣ, ಹೊನಾವರ, ಆಲಮಟ್ಟಿ ಎಚ್‌ಎಂಎಸ್, ಸೇಡಂ, ತಾವರಗೇರ, ಕವಡಿಮಟ್ಟಿ, ಮಸ್ಕಿ, ದೊಡ್ಡಬಳ್ಳಾಪುರ, ದೇವನಹಳ್ಳಿ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ , ಜಯಪುರ ತಲಾ 2 ಸೆಂ.ಮೀ ಮಳೆಯಾಗಿದೆ.

ಉಪ್ಪಿನಂಗಡಿ, ಕದ್ರಾ, ಶಿರಾಲಿ, ಮಂಕಿ, ಕಿರವತ್ತಿ, ಕುಮಟಾ, ಯಲ್ಲಾಪುರ, ನಾರಾಯಣಪುರ ಎಚ್‌ಎಂಎಸ್, ಗಬ್ಬೂರು, ತುಮಕೂರು, ಎನ್ ಆರ್ ಪುರ, ಕೊಟ್ಟಿಗೆಹಾರ, ವಿರಾಜಪೇಟೆ, ಪೊನ್ನಂಪೇಟೆ ಪಿಡಬ್ಲ್ಯೂಡಿ, ನಾಪೋಕ್ಲು, ಕೃಷ್ಣರಾಜಪೇಟೆ, ಬಿ ದುರ್ಗ, ಮಾಲೂರು, ತಾಳಗುಪ್ಪ, ಹುಂಚದಕಟ್ಟೆ , ಹರಪನಹಳ್ಳಿ , ಸಕಲೇಶಪುರ, ಚಿತ್ರದುರ್ಗ, ಸಂತೆಬೆನ್ನೂರಲ್ಲಿ ತಲಾ 1ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

VISTARANEWS.COM


on

ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಂತರ ದೇಶಾದ್ಯಂತ ಪೆಟ್ರೋಲ್‌ ಮತ್ತು ಡೀಸಲ್‌ ಬೆಲೆ ಹೇಚ್ಚಾಗಬಹುದು ಎಂಬ ಮಾಧ್ಯಮಗಳ ವರದಿಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.


ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ X ನಲ್ಲಿ ಮಾಡಿರುವ ಪೋಸ್ಟ್‌ ನಲ್ಲಿ ಸ್ಪಷ್ಟೀಕರಣ ನೀಡಿದೆ.


ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.


ಐದು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್‌ 29 ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್‌ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಂತರ ಡೀಸೆಲ್‌ ಮತ್ತು ಪೆಟ್ರೋಲ್‌ ಬೆಲೆ ಏರಿಕೆಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.


ಕೇಂದ್ರದ ಈ ಸ್ಪಷ್ಟನೆ ವಾಹನ ಸವಾರರೂ ಸೇರಿದಂತೆ ದೇಶದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

Continue Reading

Fact Check

ವಾಹನ ಸವಾರರಿಗೆ ಬಿಗ್ ರಿಲೀಫ್: ಪೆಟ್ರೋಲ್-ಡೀಸೆಲ್ ದರ ಏರಿಕೆ ವದಂತಿಗೆ ಕೇಂದ್ರ ಸರ್ಕಾರ ಬ್ರೇಕ್!

VISTARANEWS.COM


on

ಕಳೆದ ಕೆಲವು ದಿನಗಳಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವದಂತಿಗಳಿಗೆ ಕೇಂದ್ರ ಸರ್ಕಾರ ಅಧಿಕೃತವಾಗಿ ತೆರೆ ಎಳೆದಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಏರಿಕೆಯಾಗಲಿದೆ ಎಂಬ ವರದಿಗಳನ್ನು ಸರ್ಕಾರ ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ಅಂತಹ ಯಾವುದೇ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ದೃಢಪಡಿಸಿದೆ. ಇಂತಹ ಸುದ್ದಿಗಳು ಕೇವಲ ಜನರಲ್ಲಿ ಭಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದು, ಸಾರ್ವಜನಿಕರು ಇವುಗಳಿಗೆ ಕಿವಿಗೊಡಬಾರದು ಎಂದು ವಿನಂತಿಸಿದೆ.

ವಿಧಾನಸಭಾ ಚುನಾವಣೆಗಳು ಏಪ್ರಿಲ್ 29ಕ್ಕೆ ಕೊನೆಗೊಳ್ಳುತ್ತಿದ್ದಂತೆ ಇಂಧನ ದರ ಗಗನಕ್ಕೇರಲಿದೆ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 120 ಡಾಲರ್ ತಲುಪಿರುವುದು ಇದಕ್ಕೆ ಕಾರಣ ಎಂಬ ವರದಿಗಳು ಹರಿದಾಡುತ್ತಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗಿದ್ದರೂ ಭಾರತದಲ್ಲಿ ಬೆಲೆಗಳನ್ನು ನಿಯಂತ್ರಣದಲ್ಲಿಟ್ಟಿರುವ ಏಕೈಕ ದೇಶ ನಮ್ಮದಾಗಿದೆ ಎಂದು ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದಂತಹ ಕಠಿಣ ಪರಿಸ್ಥಿತಿಯಲ್ಲೂ ನಾಗರಿಕರನ್ನು ರಕ್ಷಿಸಲು ಸರ್ಕಾರ ಅಬಕಾರಿ ಸುಂಕವನ್ನು ಈಗಾಗಲೇ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸಿರುವುದನ್ನು ನೆನಪಿಸಿದೆ.

ದೇಶದ ಇಂಧನ ಭದ್ರತೆಯ ಬಗ್ಗೆಯೂ ಭರವಸೆ ನೀಡಿರುವ ಸರ್ಕಾರ, ಸದ್ಯ ಎಲ್ಲಾ ರಿಫೈನರಿಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಲಭ್ಯತೆಗೆ ಯಾವುದೇ ಕೊರತೆಯಿಲ್ಲ ಎಂದು ತಿಳಿಸಿದೆ. ಕಚ್ಚಾ ತೈಲ ಪೂರೈಕೆಯ ಮೇಲೆ ಸರ್ಕಾರ ನಿರಂತರ ನಿಗಾ ವಹಿಸಿದ್ದು, ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆಯಾಗದಂತೆ ಕ್ರಮ ವಹಿಸುತ್ತಿದೆ. ಇದರಿಂದಾಗಿ ಪೆಟ್ರೋಲ್ ಬೆಲೆ ಏರಿಕೆಯ ಭೀತಿಯಲ್ಲಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ.

Continue Reading

Latest

ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ದಿನಾಂಕ ಪ್ರಕಟ: ಅನುತ್ತೀರ್ಣರಾದವರಿಗೆ ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ

VISTARANEWS.COM


on

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 94.10 ರಷ್ಟು ದಾಖಲೆ ಪ್ರಮಾಣದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ‘ಪರೀಕ್ಷೆ-2’ (ಮರುಪರೀಕ್ಷೆ) ದಿನಾಂಕಗಳನ್ನು ಘೋಷಿಸಲಾಗಿದ್ದು, ಮೇ 18ರಿಂದ ಮೇ 25, 2026ರವರೆಗೆ ಪರೀಕ್ಷೆಗಳು ಜರುಗಲಿವೆ. ವಿಶೇಷವೆಂದರೆ, ಈ ಬಾರಿ ವಿದ್ಯಾರ್ಥಿಗಳಿಂದ ಯಾವುದೇ ರೀತಿಯ ಪರೀಕ್ಷಾ ಶುಲ್ಕವನ್ನು ವಸೂಲಿ ಮಾಡದಿರಲು ಸರ್ಕಾರ ನಿರ್ಧರಿಸಿದೆ.

ಕಳೆದ ವರ್ಷಗಳಲ್ಲಿ ಪ್ರತಿ ವಿಷಯಕ್ಕೆ ₹250 ಶುಲ್ಕವನ್ನು ನಿಗದಿಪಡಿಸಲಾಗುತ್ತಿತ್ತು, ಆದರೆ ಈ ಬಾರಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಸಂಪೂರ್ಣ ಉಚಿತಗೊಳಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಮರುಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕಿದೆ. ಗಮನಿಸಬೇಕಾದ ಮತ್ತೊಂದು ಮುಖ್ಯ ಅಂಶವೆಂದರೆ, ಈ ವರ್ಷ ಮಂಡಳಿಯು ಕೇವಲ ಎರಡು ಪರೀಕ್ಷೆಗಳಿಗೆ ಮಾತ್ರ ಅವಕಾಶ ನೀಡುತ್ತಿದ್ದು, ಈ ಹಿಂದೆ ಇದ್ದಂತೆ ‘ಮೂರನೇ ಪರೀಕ್ಷೆ’ (Exam-3) ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇದು ಈ ಸಾಲಿನ ಅಂತಿಮ ಅವಕಾಶವಾಗಲಿದೆ.

ಇನ್ನು ತಮ್ಮ ಫಲಿತಾಂಶದಲ್ಲಿ ಅಂಕಗಳ ವ್ಯತ್ಯಯವಾಗಿದೆ ಎಂದು ಭಾವಿಸುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ (Revaluation) ಮತ್ತು ಅಂಕಗಳ ಮರುಎಣಿಕೆಗೆ (Re-totalling) ಅವಕಾಶ ಕಲ್ಪಿಸಲಾಗಿದೆ. ಫಲಿತಾಂಶ ಪ್ರಕಟವಾದ ದಿನದಿಂದ 15 ದಿನಗಳ ಒಳಗಾಗಿ ಆಸಕ್ತ ವಿದ್ಯಾರ್ಥಿಗಳು kseab.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದಾಖಲೆ ಮಟ್ಟದ ಫಲಿತಾಂಶ ಬಂದಿದ್ದರೂ, ಒಂದು ವೇಳೆ ಅಂಕಗಳಲ್ಲಿ ಅಸಮಾಧಾನವಿದ್ದರೆ ಈ ತಾಂತ್ರಿಕ ಸೌಲಭ್ಯವನ್ನು ಬಳಸಿಕೊಳ್ಳಲು ಮಂಡಳಿ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

Continue Reading

Latest

ಬಿಸಿಲಿನ ತಾಪಕ್ಕೆ 32 ನವಿಲುಗಳ ಸಾವು: ತುಮಕೂರು ಜಿಲ್ಲೆಯಲ್ಲಿ ಹೀಟ್‌ಸ್ಟ್ರೋಕ್ ಭೀತಿ!

VISTARANEWS.COM


on

ತುಮಕೂರು: ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲು ಅಕ್ಷರಶಃ ಮೃತ್ಯುಕೂಪವಾಗಿ ಪರಿಣಮಿಸಿದ್ದು, ಕಳೆದ ಐದಾರು ದಿನಗಳಲ್ಲಿ ಬರೋಬ್ಬರಿ 32 ನವಿಲುಗಳು ಸಾವನ್ನಪ್ಪಿರುವುದು ಆತಂಕಕಾರಿ ಸಂಗತಿಯಾಗಿದೆ. ತುಮಕೂರು ತಾಲೂಕಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ ಮತ್ತು ಹುಲ್ಲೆನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಏಪ್ರಿಲ್ 16ರಿಂದ 21ರ ಅವಧಿಯಲ್ಲಿ ಈ ರಾಷ್ಟ್ರಪಕ್ಷಿಗಳು ಮೃತಪಟ್ಟಿವೆ. ತೀವ್ರವಾಗಿ ಏರುತ್ತಿರುವ ತಾಪಮಾನ ಮತ್ತು ನೀರಿನ ಹಸಿವಿನಿಂದಾಗಿ ಉಂಟಾಗುವ ‘ಹೀಟ್‌ಸ್ಟ್ರೋಕ್’ (Heatsroke) ಈ ಸಾವಿಗೆ ಪ್ರಮುಖ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ಒಂದೇ ಭಾಗದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನವಿಲುಗಳು ಬಲಿಯಾಗಿರುವುದು ಅರಣ್ಯ ಇಲಾಖೆ ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಈ ಸಾವು ಕೇವಲ ಬಿಸಿಲಿನ ಧಗೆಯಿಂದ ಸಂಭವಿಸಿದೆಯೇ ಅಥವಾ ಯಾವುದಾದರೂ ಸಾಂಕ್ರಾಮಿಕ ರೋಗ ಹರಡಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹೆಚ್ಚಿನ ಖಚಿತತೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಪ್ರಯೋಗಾಲಯದ ವರದಿ ಬಂದ ನಂತರವಷ್ಟೇ ಸಾವಿನ ಹಿಂದಿನ ನಿಖರ ಕಾರಣ ಪತ್ತೆಯಾಗಲಿದೆ.

ಬಿಸಿಲಿನ ತಾಪದಿಂದ ವನ್ಯಜೀವಿಗಳನ್ನು ರಕ್ಷಿಸಲು ಅರಣ್ಯ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಟ್ಟಿಗಳನ್ನು ಭರ್ತಿ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ವ್ಯಾಪ್ತಿಯಲ್ಲಿ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪಕ್ಷಿ ಸಂಕುಲದ ಮೇಲೆ ಇದು ಗಂಭೀರ ಪರಿಣಾಮ ಬೀರುತ್ತಿದೆ. ವರದಿ ಬರುವವರೆಗೆ ಗ್ರಾಮಸ್ಥರು ಮತ್ತು ಅರಣ್ಯ ರಕ್ಷಕರು ಜಾಗೃತರಾಗಿರುವಂತೆ ಸೂಚಿಸಲಾಗಿದ್ದು, ಈ ಘಟನೆಯು ಜಿಲ್ಲೆಯಲ್ಲಿ ಭೀತಿ ಹುಟ್ಟಿಸಿದೆ.

Continue Reading
Advertisement
Latest8 minutes ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

Latest10 minutes ago

ಯಡಿಯೂರಪ್ಪ ರಾಜಕೀಯ ಪ್ರವೇಶಿಸಿ 50 ವರ್ಷ: ಮೇ 9 ರಂದು ಅಭಿಮಾನೋತ್ಸವ: ಸಂಸದ ಗೋವಿಂದ ಕಾರಜೋಳ

Fact Check10 minutes ago

ವಾಹನ ಸವಾರರಿಗೆ ಬಿಗ್ ರಿಲೀಫ್: ಪೆಟ್ರೋಲ್-ಡೀಸೆಲ್ ದರ ಏರಿಕೆ ವದಂತಿಗೆ ಕೇಂದ್ರ ಸರ್ಕಾರ ಬ್ರೇಕ್!

Latest31 minutes ago

ಅಮೆರಿಕದಲ್ಲಿ ಜನ್ಮಸಿದ್ಧ ಪೌರತ್ವ; ಭಾರತ, ಚೀನಾ ವಿರುದ್ಧ ಟ್ರಂಪ್ ಆಕ್ರೋಶ

Latest44 minutes ago

ನೇಪಾಳದಲ್ಲಿ ‘ರ‍್ಯಾಪರ್’ ಪ್ರಧಾನಿ ಬಾಲೆನ್ ಶಾ ಕ್ರಾಂತಿ: ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಆರೋಪ ಕೇಳಿಬಂದ 26 ದಿನಕ್ಕೇ ಇಬ್ಬರು ಸಚಿವರ ಔಟ್!

Latest1 hour ago

ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುರುಕುಗೊಂಡ ಮತದಾನ; ಮುರ್ಶಿದಾಬಾದ್‌ನಲ್ಲಿ ಕಚ್ಚಾ ಬಾಂಬ್ ಸ್ಫೋಟ

Latest1 hour ago

ಸ್ಟೇಜ್ ಪರ್ಫಾರ್ಮೆನ್ಸ್ ವೇಳೆ ಲಿಪ್‌ಸಿಂಕ್‌ ಮಾಡಿದ ‘ಧುರಂಧರ್‌’ ಗಾಯಕಿ: ನೆಟ್ಟಿಗರು ಫುಲ್ ಗರಂ!

Narendra Modi
Latest1 hour ago

ಪಶ್ಚಿಮ ಬಂಗಾಳ-ತಮಿಳುನಾಡುಗಳಲ್ಲಿ ದಾಖಲೆ ಮತದಾನ: ಪ್ರಧಾನಿ ಮೋದಿ ವಿಶ್ವಾಸ

Latest1 hour ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ವಿಶ್ವಾಸ

Latest2 hours ago

ಎಸ್‌ಎಸ್‌ಎಲ್‌ಸಿ ಮರುಪರೀಕ್ಷೆ ದಿನಾಂಕ ಪ್ರಕಟ: ಅನುತ್ತೀರ್ಣರಾದವರಿಗೆ ಉಚಿತವಾಗಿ ಪರೀಕ್ಷೆ ಬರೆಯಲು ಅವಕಾಶ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌